Breaking News

ಬೈಕ್, ಟ್ರ್ಯಾಕ್ಟರ್ ಡಿಕ್ಕಿ- ಜಾತ್ರೆಯಿಂದ ವಾಪಸ್ ಬರುತ್ತಿದ್ದ ಇಬ್ಬರು ಸಾವು

Spread the love

ಹಾವೇರಿ: ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದ ಘಟನೆ ಹಾವೇರಿ ಸಮೀಪದ ಹೊಸಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಹಾವೇರಿಯ ಬಸವೇಶ್ವನಗರ ನಿವಾಸಿ ಬೆಲ್ಲದ ವ್ಯಾಪಾರಿ ವಿಜಯ ಕವಲಗುಡ್ಡ (38), ಯಾಲಕ್ಕಿ ಓಣಿಯ ನಿವಾಸಿ ಕಬ್ಬಿಣದ ಕೃಷಿ ಉಪಕರಣಗಳ ವ್ಯಾಪಾರಿಯಾಗಿದ್ದ ಗಣೇಶ ರಟಗಲ್ (38) ಗುರುತಿಸಲಾಗಿದೆ.ಮೃತರು ತೊಗರ್ಸಿ ಜಾತ್ರೆಗೆ ಹೋಗಿದ್ದರು. ಅಲ್ಲಿಂದ ಮರಳಿ ವಾಪಸ್ಸು ಹಾವೇರಿಗೆ ಬರುತ್ತಿದ್ದ ವೇಳೆ ಹಾನಗಲ್-ಹಾವೇರಿ ರಾಜ್ಯ ಹೆದ್ದಾರಿಯಲ್ಲಿ ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ