Breaking News

ಏನದು ಸಿನಿಮಾ? ನಾನು ಹೋಗಲ್ಲ: ಸ್ಪೀಕರ್‌ ಆಹ್ವಾನ ತಿರಸ್ಕರಿಸಿದ ಸಿದ್ದು

Spread the love

ಬೆಂಗಳೂರು: ನಾಳೆ ಸಂಜೆ 6.45ಕ್ಕೆ ಮಂತ್ರಿ ಮಾಲ್‌ನ ಸ್ಕ್ರೀನ್‌ನಲ್ಲಿ ಬಾಲಿವುಡ್‌ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸದನದಲ್ಲೇ ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಹ್ವಾನ ನೀಡಿದ್ದಾರೆ. ಆದರೆ ಸ್ಪೀಕರ್‌ ಆಹ್ವಾನವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.

ಏನದು ಸಿನಿಮಾ? ನಾನು ಸಿನಿಮಾ ನೋಡಲು ಹೋಗ್ತಾ ಇಲ್ಲ. ಆಸಕ್ತಿ ಇರುವವರು ಹೋಗುತ್ತಾರೆ ಅನಿಸುತ್ತೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯಾಕಾಂಡ ಕುರಿತ ಚಿತ್ರ ʻದಿ ಕಾಶ್ಮೀರ್ ಫೈಲ್ಸ್ʼ ವೀಕ್ಷಣೆಗೆ ನಾಳೆ ವಿಧಾನಸಭೆ ಸದಸ್ಯರಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಸಂಬಂಧ ವಿಧಾನಸಭೆ ಕಲಾಪದಲ್ಲಿಂದು ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಣೆ ಮಾಡಿದರು. ಆಡಳಿತ ಮತ್ತು ವಿಪಕ್ಷಗಳ ಸದಸ್ಯರಿಗೆ ಚಿತ್ರ ವೀಕ್ಷಣೆಗೆ ಆಹ್ವಾನ ನೀಡಿದರು.

ನಾಳೆ ಸಂಜೆ 6.45 ಕ್ಕೆ ಮಂತ್ರಿ ಮಾಲ್‌ನಲ್ಲಿ ಶಾಸಕರಿಗೆ ಸಿನಿಮಾ ವೀಕ್ಷಣೆಗೆ ವಿಧಾನಸಭೆ ಸಚಿವಾಲಯದಿಂದ ವ್ಯವಸ್ಥೆ ಮಾಡಲಾಗಿದೆ. ಸಿನಿಮಾಗೆ ಸರ್ಕಾರ ತೆರಿಗೆ ವಿನಾಯಿತಿ ನೀಡಿದ್ದಕ್ಕೆ ಸ್ಪೀಕರ್ ಕಾಗೇರಿ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ