ಬೆಂಗಳೂರು: ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ಬರದಂತೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ.
ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಇತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆಯನ್ನು ಫೆಬ್ರವರಿ 25ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.
ನಾಳೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ. ಪ್ರಕರಣ ಕೇವಲ ಧಾರ್ಮಿಕ ಸೂಕ್ಷ್ಮ ಸಂಗತಿಯನ್ನಷ್ಟೇ ಒಳಗೊಂಡಿದೆಯಲ್ಲದೇ, ರಾಜಕೀಯವಾಗಿಯೂ ತಳುಕು ಹಾಕಿಕೊಂಡಿರುವುದರಿಂದ ಹೈಕೋರ್ಟ್ ಯಾವುದೇ ತೀರ್ಪು ನೀಡಿದರೂ ಅರ್ಜಿದಾರ ವಿದ್ಯಾರ್ಥಿನಿಯರು ಅಥವಾ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಎಲ್ಲ ಸಾಧ್ಯತೆಯೂ ಇದೆ.
Laxmi News 24×7