Breaking News

ಡೀಸೆಲ್ ಕದಿಯಲು ಬಂದವರ ಕಾಲಿಗೆ ಪೊಲೀಸರಿಂದ ಗುಂಡೇಟು

Spread the love

ಬೆಂಗಳೂರು: ಲಾರಿಗಳಲ್ಲಿ ಡೀಸೆಲ್ ಕದಿಯುತ್ತಿದ್ದ ಕಳ್ಳರ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ಜಿಗಣಿ ಕೈಗಾರಿಕಾ ಪ್ರದೇಶದ ಕೆಇಬಿ ಸರ್ಕಲ್ ಬಳಿ ನಡೆದಿದೆ.

ಭಾನುವಾರ ಬೆಳಗ್ಗಿನ ಜಾವ ಪೊಲೀಸರು ಡೀಸೆಲ್ ಕದಿಯಲು ಬಂದಿದ್ದ ಬಳ್ಳಾರಿ ಮೂಲದ ವ್ಯಕ್ತಿ ಶ್ರೀನಿವಾಸ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಮತ್ತೋರ್ವ ಸಹಚರ ಕಲಬುರಗಿ ಮೂಲದ ಚಾಲಕ ಮಲ್ಲನಗೌಡನನ್ನು ಬಂಧಿಸಿದ್ದಾರೆ.

ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಜಿಗಣಿ ಠಾಣೆ ಇನ್ಸ್ಪೆಕ್ಟರ್ ಸುದರ್ಶನ್ ಗಸ್ತು ತಿರುಗುತ್ತಿದ್ದ ವೇಳೆ ಟಾಟಾ ಸುಮೋ ಕಾರೊಂದು ಅನುಮಾನಾಸ್ಪದವಾಗಿ ಜಿಗಣಿ ರಿಂಗ್ ರೋಡ್ ಡಿಎಲ್‌ಫ್ ರಸ್ತೆ ಬಳಿ ಕಂಡಿದೆ. ಲಾರಿಯಿಂದ ಕ್ಯಾನ್ ಮೂಲಕ ಡೀಸೆಲ್ ತೆಗೆಯುವುದನ್ನು ಇನ್ಸ್ಪೆಕ್ಟರ್ ಕಣ್ಣಾರೆ ಕಂಡಿದ್ದರು. ಪೊಲೀಸರನ್ನು ಕಂಡ ತಕ್ಷಣ ಆರೋಪಿಗಳು ಅಲ್ಲಿಂದ ಓಟಕ್ಕಿತ್ತಿದ್ದಾರೆ.

ಟಾಟಾ ಸುಮೋ ಮೂಲಕ ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆದು, ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ಪೊಲೀಸರು ಚೇಸ್ ಮಾಡಿದ್ದು, ಜಿಗಣಿ ಕೆಇಬಿ ಸರ್ಕಲ್ ಬಳಿ ಅಡ್ಡಗಟ್ಟಿದ್ದಾರೆ. ಚಾಲಕ ಮಲ್ಲನಗೌಡನನ್ನು ಹಿಡಿಯಲು ಹೋದ ಪೊಲೀಸ್ ಪೇದೆ ಕೊಟೇಶ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಸುದರ್ಶನ್ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ