Breaking News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ಪ್ರಕರಣ, ಇಂದೇ ಶುರುವಾಗುತ್ತಾ ವಿಚಾರಣೆ?

Spread the love

ನವದೆಹಲಿ, ಮಾ. 16: ಶಾಲೆಗಳಲ್ಲಿ ಹಿಜಾಬ್ (Hijab) ಧರಿಸುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಈಗ ಸುಪ್ರೀಂ ಕೋರ್ಟ್‌ (Supreme Court) ಮೆಟ್ಟಿಲೇರಿದೆ. ನಿನ್ನೆ (ಮಾರ್ಚ್ 15ರಂದು) ಕರ್ನಾಟಕ ಹೈಕೋರ್ಟ್ (Karnataka High Court) ನೀಡಿರುವ ತೀರ್ಪನ್ನು ಪ್ರಶ್ನಿಸಿ ನಿಬಾ ನಾಜ್ ಎಂಬ ವಿದ್ಯಾರ್ಥಿನಿ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದು ಇಂದು ಅವರ ಪರ ವಕೀಲರು ಓಪನ್ ಕೋರ್ಟಿನಲ್ಲಿ ಮೆನ್ಷನ್ ಕೂಡ ಮಾಡಲಿದ್ದಾರೆ.

ಇದೇ ರೀತಿ ಇಂದು ಇನ್ನೂ ಹಲವು ಅರ್ಜಿಗಳು ಸಲ್ಲಿಕೆಯಾಗುವ ಮತ್ತು ನ್ಯಾಯಾಲಯದಲ್ಲಿ ಮೆನ್ಷನ್ ಆಗುವ ಸಾಧ್ಯತೆ ಇದೆ. ಈ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಏನು ನಿಲುವು ತೆಳೆಯುತ್ತದೆ ಎಂಬ ಕುತೂಹಲವೂ ನಿರ್ಮಾಣವಾಗಿದೆ.

ವಿದ್ಯಾರ್ಥಿನಿ ನಿಬಾ ನಾಜ್ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದು ಇಂದು ಅವರ ಪರ ವಕೀಲ ಅನಸ್ ತನ್ವೀರ್ ಮೂಲಕ ಮೆನ್ಷನ್ ಮಾಡಲಿದ್ದಾರೆ. ಉಡುಪಿಯಲ್ಲಿ ಪ್ರತಿಭಟನೆ ಮಾಡಿದ ಆರು ವಿದ್ಯಾರ್ಥಿನಿಯರ ಪರ ಹೈಕೋರ್ಟಿನಲ್ಲಿ ವಾದ ಮಂಡಿಸಿದ್ದ ವಕೀಲ ದೇವದತ್ ಕಾಮತ್ ಇಂದು ಸುಪ್ರೀಂ ಕೋರ್ಟಿನಲ್ಲೂ ಅರ್ಜಿ ಸಲ್ಲಿಸಲಿದ್ದಾರೆ. ಅರ್ಜಿ ಸಲ್ಲಿಕೆಯ ಬಳಿಕ ಓಪನ್ ಕೋರ್ಟಿನಲ್ಲಿ ಮೆನ್ಷನ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

Spread the loveಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ