Breaking News

ಪೊಲೀಸರ ಗುಂಡಿಗೆ ಇಬ್ಬರು ಅತ್ಯಾಚಾರ ಆರೋಪಿಗಳು ಬಲಿ​

Spread the love

ಗುವಾಹಟಿ(ಅಸ್ಸೋಂ): ಕೇವಲ 24 ಗಂಟೆಯೊಳಗೆ ಎರಡು ಎನ್​ಕೌಂಟರ್​ ನಡೆಸಿರುವ ಅಸ್ಸೋಂ ಪೊಲೀಸರು ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನ ಎನ್​ಕೌಂಟರ್​ ಮಾಡಿದ್ದಾರೆ. ಮೊದಲನೇ ಎನ್​ಕೌಂಟರ್​​ ಗುವಾಹಟಿ ಹಾಗೂ ಎರಡನೇಯದು ಉದಲಗುರಿ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮಾರ್ಚ್​​ 10ರಂದು ರಾಜೇಶ್ ಎಂಬ ವ್ಯಕ್ತಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಮರುದಿನ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದ ಪೊಲೀಸರು, ಆತನನ್ನ ಕೃತ್ಯ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ, ಮಾಹಿತಿ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಲು ರಾಜೇಶ್ ಮುಂದಾಗಿದ್ದು, ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಆರೋಪಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಉದಲಗುರಿ ಜಿಲ್ಲೆಯಲ್ಲೂ ಇಂತಹ ಘಟನೆ ನಡೆದಿದ್ದು, ಅತ್ಯಾಚಾರ ಆರೋಪಿ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆಗ ಆತನ ಪ್ರಾಣ ಸ್ಥಳದಲ್ಲೇ ಹಾರಿಹೋಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

Spread the loveಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ