Breaking News

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ. ವಸತಿ ಯೋಜನೆಗಳ ಆದಾಯ ಮಿತಿ ಹೆಚ್ಚಳ.

Spread the love

ಬೆಂಗಳೂರು: ರಾಜ್ಯದ ವಿವಿಧ ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಫಲಾನುಭವಿಗಳ ಆಯ್ಕೆ ಮಾಡಲು ನಿಗದಿಪಡಿಸಿರುವ ಆದಾಯ ಮಿತಿಯನ್ನು ಹೆಚ್ಚಳ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಆದಾಯ ಮಿತಿ ಹೆಚ್ಚಳ ಮಾಡಿರುವುದನ್ನು ಘೋಷಿಸಿದ್ಧಾರೆ.

ಈ ಮೊದಲು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಆದಾಯ ಮಿತಿಯನ್ನು 32 ಸಾವಿರಕ್ಕೆ ನಿಗದಿಪಡಿಸಲಾಗಿತ್ತು, ಈಗ ಇದನ್ನು 1.20 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇನ್ನು ನಗರಪ್ರದೇಶದಲ್ಲಿ 87 ಸಾವಿರ ರೂ. ಇದ್ದ ಆದಾಯ ಮಿತಿಯನ್ನು 2 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ಧಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ