Breaking News

ಮಣಿಪುರದಲ್ಲಿ ಬಿರೆನ್ ಸಿಂಗ್, ಗೋವಾದಲ್ಲಿ ಸಾವಂತ್ ಸಿಎಂ ಆಗಿ ಮುಂದುವರಿಕೆ ಸಾಧ್ಯತೆ

Spread the love

ನವದೆಹಲಿ: ಮಣಿಪುರದಲ್ಲಿ ಎನ್‌. ಬಿರೆನ್ ಸಿಂಗ್ ಹಾಗೂ ಗೋವಾದಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ.

ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಗೋವಾದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಹೊಸ ಸರ್ಕಾರ ರಚನೆಯ ಸಂಬಂಧ ಪ್ರಮೋದ್‌ ಸಾವಂತ್ ಹೈಕಮಾಂಡ್‌ ಭೇಟಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.

40 ಕ್ಷೇತ್ರಗಳ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿಯ (ಎಂಜಿಪಿ) ಇಬ್ಬರು ಶಾಸಕರು ಹಾಗೂ ಮೂವರು ಪಕ್ಷೇತರರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.

ಇತ್ತ ಬಿರೆನ್ ಸಿಂಗ್ ಅವರು ಇಂದು (ಬುಧವಾರ) ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.


Spread the love

About Laxminews 24x7

Check Also

ಗ್ರಾಪಂ ಅಭಿವೃದ್ಧಿಗೆ ಸದಸ್ಯರ ಸಹಕಾರ ಅತ್ಯಗತ್ಯ

Spread the loveಆನೇಕಲ್​ : ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಎಲ್ಲರೂ ನೀಡಿದ ಸಹಕಾರ ಕಾರಣ ಎಂದು ಹೆನ್ನಾಗರ ಗ್ರಾಪಂ ಅಧ್ಯಕ್ಷ ಕೆ.ವಿನಯ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ