Breaking News

ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ.

Spread the love

ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ. ಈ ಮಾದರಿಯ ಸಿನಿಮಾಗಳಲ್ಲೇ ಅತೀ ಕಡಿಮೆ ಸಮಯದಲ್ಲಿ ಇಷ್ಟೊಂದು ಗಳಿಕೆ ಮಾಡಿದ ಮೊದಲ ಚಿತ್ರ  ಎಂಬ ಹೆಗ್ಗಳಿಕೆಗೂ ಕಾರಣವಾಗಿದೆ.

ಈ ಕುರಿತು ಬಾಲಿವುಡ್ ಖ್ಯಾತ ಟ್ರೇಡ್ ಅನಾಲಿಸಿಸ್ಟ್ ಟ್ವೀಟ್ ಕೂಡ ಮಾಡಿದ್ದು, ಆಯಾ ದಿನದ ಗಳಿಕೆಯ ಲೆಕ್ಕ ಕೊಟ್ಟಿದ್ದಾರೆ. ಮೊದಲ ದಿನ 3.55 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದ್ದರೆ, ಎರಡನೇ ದಿನದ ಗಳಿಕೆ 8.50 ಕೋಟಿ, ಮೂರನೇ ದಿನ 15.10 ಕೋಟಿ, ನಾಲ್ಕನೇ ದಿನ 15.06 ಕೋಟಿ, ಐದನೇ ದಿನಕ್ಕೆ 18 ಕೋಟಿಯ ಭರ್ಜರಿ ಕಲೆಕ್ಷನ್ ಮಾಡಿದೆ. 

ಸಾಮಾನ್ಯವಾಗಿ ವೀಕೆಂಡ್ ನಲ್ಲಿ ಕಲೆಕ್ಷನ್ ಜೋರಾಗಿರುತ್ತದೆ. ಆದರೆ, ಸಾಮಾನ್ಯ ದಿನದಲ್ಲೇ ಈ ಚಿತ್ರ 18 ಕೋಟಿ ರೂಪಾಯಿ ಗಳಿಕೆ ಮಾಡುವುದರೊಂದಿಗೆ ಹೊಸ ದಾಖಲೆ ಬರೆದಿದೆ. ಈ ಮೂಲಕ ಅತೀ ಶೀಘ್ರದಲ್ಲೇ ನೂರು ಕೋಟಿ ಕ್ಲಬ್ ಗೆ ಈ ಸಿನಿಮಾ ಸೇರಲಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ