Breaking News

ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ.

Spread the love

ಬೆಂಗಳೂರು: ಡಿಸೆಂಬರ್ 17ರ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ.

ಎಂಇಎಸ್‍ನ 38 ಪುಂಡರ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣಗಳನ್ನು ಕೈಬಿಟ್ಟು ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವುದಾಗಿ ಬೆಳಗಾವಿ ಅಧಿವೇಶನ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ಗುಡುಗಿದ್ದರು. ಬೆಳಗಾವಿ ರಾಜಕಾರಣಿಗಳ ಒತ್ತಡಕ್ಕೆ ತಲೆಬಾಗಿ ಪೊಲೀಸ್ ಇಲಾಖೆ ಈ ರೀತಿ ಮಾಡಿದ್ಯಾ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ಸಿಎಂ ಬೊಮ್ಮಾಯಿ ಹೇಳಿಕೆ ಹೊರತಾಗಿಯೂ ಚಾರ್ಜ್‍ಶೀಟ್‍ನಲ್ಲಿ 124(ಎ) ಸೆಕ್ಷನ್ ಕೈಬಿಟ್ಟಿದ್ದೇಕೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಇದೇ ರೀತಿ ಮಾಡಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ನಾರಾಯಣಗೌಡ ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ