Breaking News

ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

Spread the love

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಡಾ.ಪುನೀತ್ ರಾಜ್‍ಕುಮಾರ್ ಸಮಾಧಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಭೇಟಿ ನೀಡಿ ದರ್ಶನ ಪಡೆದರು.ಇಂದು ಪುನೀತ್ ರಾಜ್‍ಕುಮಾರ್ 47ನೇ ಹುಟ್ಟುಹಬ್ಬದ ಹಿನ್ನೆಲೆ ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಭೇಟಿ ನೀಡಿ ಪ್ರದಕ್ಷಿಣೆ ಹಾಕಿ ನಮನ ಸಲ್ಲಿಸಿದರು. ಇದೇ ವೇಳೆ ವರನಟ ಡಾ. ರಾಜ್‍ಕುಮಾರ್ ಹಾಗೂ ಪಾರ್ವತಮ್ಮ ರಾಜ್‍ಕುಮಾರ್ ಅವರ ಸಮಾಧಿಯ ದರ್ಶನವನ್ನು ಸಹ ಪಡೆದರು. 

ಅಪ್ಪು ಜನುಮ ದಿನದ ಪ್ರಯುಕ್ತ ಇಂದು ಪುನೀತ್ ಅಭಿನಯದ ಬಹುನಿರೀಕ್ಷಿತ ಜೇಮ್ಸ್ ಸಿನಿಮಾ ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಲು ಮುಂಜಾನೆಯಿಂದಲೇ ಚಿತ್ರಮಂದಿರದತ್ತ ಜನ ಸಾಗರವೇ ಹರಿದುಬರುತ್ತಿದೆ. ಒಟ್ಟಾರೆ ಅಪ್ಪು ಹುಟ್ಟುಹಬ್ಬವನ್ನು ಕರುನಾಡಿನ ಜನತೆ ಹಬ್ಬದಂತೆ ಆಚರಿಸುತ್ತಿದ್ದಾರೆ


Spread the love

About Laxminews 24x7

Check Also

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ; ಅರ್ಧ ಗಂಟೆಯಲ್ಲೇ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ‌. ವಿಠ್ಠಲ ಕರಾಡೆ(29) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ