Breaking News

ಸರ್ಕಾರಿ ಸಿಬ್ಬಂದಿ ವೇತನಕ್ಕೆ ಆಯೋಗ ರಚನೆ: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಸುಮಾರು 5.12 ಲಕ್ಷ ನೌಕರರ ವೇತನ ಪರಿಷ್ಕರಣೆ ಕುರಿತು ಶಿಫಾರಸುಗಳ ನೀಡಲು ಶೀಘ್ರದಲ್ಲೇ ಆಯೋಗ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದು, ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿಯಿದ್ದು, ಮುಖ್ಯಮಂತ್ರಿಗಳ ಈ ನಿರ್ಧಾರ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸರ್ಕಾರದ ಈ ಕ್ರಮದಿಂದ ಪ್ರಭಾವಿತರಾದ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ತಂಡ ಬುಧವಾರ ಸಂಜೆ ಸಿಎಂ ಅವರನ್ನು ಭೇಟಿ ಮಾಡಿ.

ಅಭಿನಂದನೆ ಸಲ್ಲಿಸಿತು.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನೌಕರರ ಪರವಾಗಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

7ನೇ ವೇತನ ಆಯೋಗದ ನಂತರ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ಪರಿಷ್ಕರಿಸುವಂತೆ ಒತ್ತಾಯಗಳು ಕೇಳಿ ಬಂದಿದ್ದವು. ಆದರೆ, ಈ ಬಗ್ಗೆ ಬಜೆಟ್ ನಲ್ಲಿ ಬೊಮ್ಮಾಯಿಯವರು ಯಾವುದೇ ಘೋಷಣೆಗಳನ್ನು ಮಾಡದೆ ನಿರಾಸೆ ಮೂಡಿಸಿದ್ದರು. ಇದೀಗ ಆಯೋಗ ರಚನೆ ಮಾಡುವುದಾಗಿ ತಿಳಿಸಿದ್ದು, ಸರ್ಕಾರದ ಈ ನಿರ್ಧಾರ ಇದೀಗ ನೌಕರರಲ್ಲಿ ಸಂತಸವನ್ನೂ ಮೂಡಿಸಿದೆ.

‘ನಾನು ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡದ ಕಾರಣ, ಸಂಘದ ಪದಾಧಿಕಾರಿಗಳು ನನ್ನನ್ನು ಭೇಟಿ ಮಾಡಿ ಬೇಡಿಕೆಯನ್ನು ಮುಂದಿಟ್ಟಿದ್ದರು. ಹಾಗಾಗಿ, ಆದಷ್ಟು ಬೇಗ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಆಯೋಗ ಇತರ ರಾಜ್ಯಗಳ ನೌಕರರ ವೇತನವನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ಮಾಡಲಿದೆ ಎಂದು ವಿಧಾನಸಭೆಯಲ್ಲಿ ಬಜೆಟ್ ಚರ್ಚೆ ವೇಳೆ ಬೊಮ್ಮಾಯಿಯವರು ತಿಳಿಸಿದರು.


Spread the love

About Laxminews 24x7

Check Also

ಹಾವೇರಿ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಕಾಲೇಜಿಗಿಲ್ಲ ಉದ್ಘಾಟನೆ ಭಾಗ್ಯ

Spread the loveಹಾವೇರಿ: ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಿ ವರ್ಷ ಕಳೆಯುತ್ತಿದ್ದರೂ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಕಾಲೇಜು ಇನ್ನೂ ಉದ್ಘಾಟನೆಯಾಗಿಲ್ಲ. ಕಾಲೇಜಿಗೆ ತೆರಳಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ