Breaking News

ಹೊಸ ಟಿಬಿ ಲಸಿಕೆಗಾಗಿ ಬಯೋಫ್ಯಾಬ್ರಿ ಜೊತೆ ಕೈ ಜೋಡಿಸಿದ ಭಾರತ್​​ ಬಯೋಟೆಕ್

Spread the love

ನವದೆಹಲಿ : ಕೋವಿಡ್ ವಿರುದ್ಧ ಕೋವಾಕ್ಸಿನ್ ಲಸಿಕೆ ತಯಾರಕ ಸಂಸ್ಥೆ ಭಾರತ್ ಬಯೋಟೆಕ್ ಕ್ಷಯರೋಗದ ವಿರುದ್ಧ ಲಸಿಕೆಯನ್ನು ಹೊರತರುವ ಚಿಂತನೆ ನಡೆಸಿದೆ. ಈ ಹಿನ್ನೆಲೆ ಶೀಘ್ರದಲ್ಲೇ ಸಂಸ್ಥೆಯು ತಂತ್ರಜ್ಞಾನಕ್ಕಾಗಿ ಮತ್ತೊಂದು ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಬುಧವಾರದಂದು ಭಾರತ್ ಬಯೋಟೆಕ್ ಸಂಸ್ಥೆ ಕ್ಷಯರೋಗ ಲಸಿಕೆ ಅಭಿವೃದ್ಧಿ, ಉತ್ಪಾದನೆ ಮತ್ತು ಮಾರುಕಟ್ಟೆಗಾಗಿ ಸ್ಪ್ಯಾನಿಷ್ ಜೈವಿಕ ಔಷಧೀಯ ಸಂಸ್ಥೆಯಾದ ಬಯೋಫ್ಯಾಬ್ರಿ ಜೊತೆ ಪಾಲುದಾರಿಕೆಯ ಒಪ್ಪಂದ ಮಾಡಿಕೊಂಡಿದೆ. ಈ ಪಾಲುದಾರಿಕೆಯು 70 ಕ್ಕೂ ಹೆಚ್ಚು ದೇಶಗಳಲ್ಲಿ ಕ್ಷಯರೋಗ (ಟಿಬಿ) ಲಸಿಕೆಗಳ ಪೂರೈಕೆ ಮಾಡಲಿದೆ.

ವಿಶೇಷವಾಗಿ ಆಗ್ನೇಯ ಏಷ್ಯಾ ಮತ್ತು ಉಪ-ಸಹಾರನ್ ಆಫ್ರಿಕಾದಲ್ಲಿ ಹೆಚ್ಚಿನ ಟಿಬಿ ಲಸಿಕೆ ಪೂರೈಸಲಿ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.ಭಾರತ್ ಬಯೋಟೆಕ್ ಮತ್ತು ಬಯೋಫ್ಯಾಬ್ರಿ ನಡುವಿನ ಈ ಒಪ್ಪಂದವು ವಿಶ್ವದಾದ್ಯಂತ ಉತ್ಪಾದನೆ ಮತ್ತು ಭವಿಷ್ಯದ ಲಸಿಕೆಯ ಪೂರೈಕೆಯನ್ನು 70 ಕ್ಕೂ ಹೆಚ್ಚು ದೇಶಗಳಲ್ಲಿ ಹೆಚ್ಚಿನ ಟಿಬಿ ಲಸಿಕೆ ಪೂರೈಸುತ್ತಿದೆ. ಪ್ರಪಂಚದಲ್ಲೇ ಅತಿ ಹೆಚ್ಚು ಟಿಬಿ ಹೊರೆ ಹೊಂದಿರುವ ದೇಶ ಎಂದರೆ ಅದು ಭಾರತ. ನಮ್ಮ ದೇಶದಲ್ಲಿ ಶೇಕಡಾ 25 ರಷ್ಟು ಪ್ರಕರಣಗಳು ಇವೆ ಎಂದು ಕಂಪನಿ ಹೇಳಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ