Breaking News

ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

Spread the love

ಬೆಂಗಳೂರು: ಹಿಜಬ್ ವಿವಾದದ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ವಿಷಯ ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಕಾರಣವಾಯಿತು. ಬಜೆಟ್ ಚರ್ಚೆ ವೇಳೆ ಕಾಂಗ್ರೆಸ್‍ನ ಸದಸ್ಯ ಸಲೀಂ ಅಹಮದ್, ತೀರ್ಪು ಯಾಕೆ ಈ ರೀತಿ ಬಂದಿತು ಎನ್ನುವ ಕುರಿತು ಚರ್ಚೆ ನಡೆಯಬೇಕು ಎಂದರು. ಈ ವಿಚಾರಕ್ಕೆ ಸದನದಲ್ಲಿ ಗಲಾಟೆ ಪ್ರಾರಂಭ ಆಯಿತು.

ಸಲೀಂ ಅಹಮದ್ ಮಾತನಾಡಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಏಕೆ ಬಂತು. ಹಿಜಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಯಾಕೆ ಹೀಗೆ ಬಂತು. ಸರ್ಕಾರದ ಆದೇಶವನ್ನೇ ಕೋರ್ಟ್ ಎತ್ತಿ ಹಿಡಿಯಿತು. ಹಿಜಬ್, ಬುರ್ಕಾ ನೂರಾರು ವರ್ಷದಿಂದ ಇದೆ. ಇದು ನಮ್ಮ ಧರ್ಮದ ಪದ್ಧತಿ. ಆದ್ರೆ ವಿವಾದ ಈಗ ಯಾಕಾಯಿತು ಎಂದು ಪ್ರಸ್ತಾಪಿಸಿದರು.

ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಹೈಕೋರ್ಟ್ ತೀರ್ಪನ್ನು ಒಪ್ಪುತ್ತೀರಾ ಅಥವಾ ವಿರೋಧಿಸುತ್ತೀರಾ? ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಹರಿ ಪ್ರಸಾದ್, ನಮ್ಮ ನಿಲುವನ್ನು ಸುಪ್ರೀಂ ಕೋರ್ಟ್‍ಗೆ ಹೇಳುತ್ತೇವೆ. ನಾವು ಇಲ್ಲಿ ಅದನ್ನು ಹೇಳಬೇಕಿಲ್ಲ, ನಮ್ಮ ಸದಸ್ಯರು ಮಾತನಾಡುವುದನ್ನು ಕೇಳಿಸಿಕೊಳ್ಳಲು ಹೇಳಿ ಎಂದು ಆಗ್ರಹಿಸಿದರು.

ಮತ್ತೆ ಮಾತು ಮುಂದುವರೆಸಿದ ಹರಿಪ್ರಸಾದ್, ಭಾಷಣದ ನಡುವೆ ನಮ್ಮ ಸದಸ್ಯರು ಸಮ್ಮತಿಸಲಿಲ್ಲ ಎಂದರೆ ಪ್ರತಿಪಕ್ಷ ನಾಯಕರಾಗಲಿ, ಸಭಾನಾಯಕರಿಗಾಗಲಿ ಮಧ್ಯದಲ್ಲಿ ಮಾತನಾಡಲು ಅವಕಾಶವಿಲ್ಲ. ಅವರಿಗೇನು ಕೊಂಬಿಲ್ಲ. ರೂಲ್ ಬುಕ್‍ನಲ್ಲಿಯೂ ಅವಕಾಶವಿಲ್ಲ ಎಂದರು.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ