ಹೈದರಾಬಾದ್(ತೆಲಂಗಾಣ): ಗಂಡನ ವರದಕ್ಷಿಣೆ ಕಿರುಕುಳ ತಾಳಲಾರದೆ ವೈದ್ಯೆಯಾಗಿದ್ದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೈದರಾಬಾದ್‌ನ ಮಲಕಪೇಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪತಿ-ಪತ್ನಿ ಇಬ್ಬರೂ ವೈದ್ಯಕೀಯ ವೃತ್ತಿಯಲ್ಲಿದ್ದರು. ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ಆದರೆ, ಗಂಡ ವರದಕ್ಷಿಣೆಗಾಗಿ ವಿಪರೀತ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ನೊಂದ ಪತ್ನಿ ಆತ್ಮಹತ್ಯೆಯ ಹಾದಿ ತುಳಿದಿದ್ದಾಳೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪತಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ನಲ್ಗೊಂಡದ ದಾಮರಚಾರ್ಲವಾಸಿ ನಿವಾಸಿ ಸಪ್ನಾ ಎಂಬವರು ಗಂಗನಪಲ್ಲಿಯ ವಿಶ್ವನಾಥ್ ಜೊತೆ ಮೊದಲ ಮದುವೆ ಮಾಡಿಕೊಂಡಿದ್ದರು. ಇಬ್ಬರ ನಡುವೆ ಹೊಂದಾಣಿಕೆ ಉಂಟಾಗದ ಕಾರಣಕ್ಕಾಗಿ ಅನಿವಾರ್ಯವಾಗಿ ವಿಚ್ಛೇದನ ಪಡೆದುಕೊಂಡಿದ್ದರು. 2015ರ ಏಪ್ರಿಲ್ ತಿಂಗಳಲ್ಲಿ ಕರ್ನೂಲ್ನ ಡಾ.ಶ್ರೀಧರ್ ಜೊತೆ ಎರಡನೇ ಮದುವೆಯಾಗಿದ್ದಾರೆ. ಈ ವೇಳೆ ವರದಕ್ಷಿಣೆ ರೂಪದಲ್ಲಿ 10 ಲಕ್ಷ ರೂ. ನಗದು ಹಾಗೂ 14 ತೊಲ ಚಿನ್ನಾಭರಣ ನೀಡಲಾಗಿತ್ತು.