Breaking News

ನಾಳೆಯಿಂದ ಎರಡು ದಿನ ಜಮ್ಮು ಪ್ರವಾಸದಲ್ಲಿ ಅಮಿತ್ ಶಾ

Spread the love

ಶ್ರೀನಗರ(ಜಮ್ಮು): ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆಯಿಂದ ಎರಡು ದಿನಗಳ ಕಾಲ ಜಮ್ಮು ಪ್ರವಾಸ ಕೈಗೊಳ್ಳಲಿದ್ದು, ಭದ್ರತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾ, ಕೇಂದ್ರ ಸಶಸ್ತ್ರ ಪಡೆ, ಕಾಶ್ಮೀರ ಪೊಲೀಸ್​, ಗುಪ್ತಚರ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಅಲ್ಲಿನ ಭದ್ರತಾ ಪರಿಸ್ಥಿತಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಲಿರುವ ಅಮಿತ್ ಶಾ, ಮಾರ್ಚ್​ 19ರಂದು ಜಮ್ಮುವಿನಲ್ಲಿ ಆಯೋಜನೆಗೊಂಡಿರುವ ಸಿಆರ್​ಪಿಎಫ್​​ನ ರೈಸಿಂಗ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

ಗೃಹ ಸಚಿವರು ಜಮ್ಮುವಿಗೆ ತೆರಳುತ್ತಿರುವ ಕಾರಣ ಈಗಾಗಲೇ ಅರೆಸೇನಾ ಮತ್ತು ಗುಪ್ತಚರ ಸಂಸ್ಥೆಯ ಕೆಲ ಅಧಿಕಾರಿಗಳು ಈಗಾಗಲೇ ಜಮ್ಮು ತಲುಪಿದ್ದಾರೆ. ಕಳೆದ ಐದು ತಿಂಗಳ ಹಿಂದೆ ಅಮಿತ್ ಶಾ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಇದೀಗ ಮತ್ತೊಮ್ಮೆ ಅಮಿತ್ ಶಾ ಕಣಿವೆ ನಾಡಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ