Breaking News

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ……….

Spread the love

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಇಂದು ಮುಂಜಾನೆಯಿಂದಲೇ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಅನೇಕ ಕಡೆ ಏಕಾಏಕಿ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆ.

ಇಂದು ಮೆಜೆಸ್ಟಿಕ್, ಚಿಕ್ಕಪೇಟೆ, ಎಂಜಿ ರಸ್ತೆ, ಸದಾಶಿವನಗರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗಾಳಿ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಒಣಗಿದ ಮರಗಳು ಬೀಳುವ ಸಾಧ್ಯತೆ ಇದೆ. ಜೊತೆಗೆ ಈಗಾಗಲೇ ಅಲ್ಲಲ್ಲಿ ರಸ್ತೆಗಳು ಬ್ಲಾಕ್ ಆಗಿವೆ. ಕೊರೊನಾ ಹೋರಾಟದ ನಡುವೆ, ಬಿಬಿಎಂಪಿ ಮಳೆ ಮುನ್ನೆಚ್ಚರಿಕೆ, ರಸ್ತೆಗಳಲ್ಲಿ ನೀರು ತೆರವಿಗೂ ಮುಂದಾಗಬೇಕಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ