Breaking News

ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ

Spread the love

ಕರ್ನಾಟಕ ಸರಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಟ್ಟ ಬೆನ್ನಲ್ಲೇ, ಸರಕಾರದ ಮತ್ತೊಂದು ಪ್ರಶಸ್ತಿ ಘೋಷಣೆಯಾಗಿದೆ. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ‘ ಸಹಕಾರ ರತ್ನ’ ಪ್ರಶಸ್ತಿಯನ್ನು ಪುನೀತ್ ಅವರಿಗೆ ಘೋಷಿಸಲಾಗಿದ್ದು, ನಂದಿನಿ ಹಾಲು ಉತ್ಪನ್ನಗಳಿಗೆ ಉಚಿತವಾಗಿ ಜಾಹೀರಾತು ನೀಡಿರುವ ಸೇವೆಯನ್ನು ಪರಿಗಣಿಸಲಾಗಿದೆ.

ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್, ‘ನಟ ಪುನೀತ್ ರಾಜ್ ಕುಮಾರ್ ಅವರು ನಂದಿನಿ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಅದನ್ನು ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಈ ಸೇವೆಯನ್ನು ಪರಿಗಣಿಸಿ ಅವರಿಗೆ ಗೌರವಿಸಲು ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನ ಮಾಡಿದ್ದೇವೆ’ ಎಂದರು. 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ