ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರವಾಗಿ 15,000 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ನಿರುದ್ಯೋಗಿಗಳಿಗೆ ಶಿಕ್ಷಣ ಇಲಾಖೆಯಿಂದ ಬಂಪರ್ ಗಿಫ್ಟ್ ಇದಾಗಿದೆ. ಶಿಕ್ಷಣ ಗುಣಮಟ್ಟ ಉತ್ತಮ ಗೊಳಿಸಲು ಶಿಕ್ಷಣ ಇಲಾಖೆ ಪ್ರಯತ್ನ ನಡೆಸಿದೆ. ಗುಣಮಟ್ಟ ಹೆಚ್ಚಿಸಲು ಶಿಕ್ಷಕರ ನೇಮಕಕ್ಕೆ ಇಲಾಖೆಯು ಮುಂದಾಗಿದೆ.
ಅದರ ಅಂಗವಾಗಿ ಹೈದರಾಬಾದ್-ಕರ್ನಾಟಕಕ್ಕೆ ಐದು ಸಾವಿರ ಹುದ್ದೆಗಳು ಮೀಸಲು ಇಡಲಾಗಿದೆ. ಉಳಿದ ಕಡೆಗಳಿಗೆ 10 ಸಾವಿರ ಶಿಕ್ಷಕರ ನೇಮಕವಾಗಲಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ.