ನವದೆಹಲಿ : ಒಂದು ಲೋಕಸಭೆ ಹಾಗೂ ನಾಲ್ಕು ರಾಜ್ಯ ಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಚುನಾವಣೆ ಏಪ್ರಿಲ್ 12 ರಂದು ನಡೆಯಲಿದೆ.
ಚುನಾವಣಾ ಆಯೋಗವು ಇತ್ತೀಚೆಗೆ ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಉಪಚುನಾವಣೆಯ ದಿನಾಂಕವನ್ನು ಪ್ರಕಟಿಸಿತ್ತು.
ಇದೀಗ ಬಿಜೆಪಿಯು ಪಶ್ಚಿಮ ಬಂಗಾಳ, ಬಿಹಾರ ಮತ್ತು ಮಹಾರಾಷ್ಟ್ರದ ಮುಂಬರುವ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಎಲ್ಲಾ ಸ್ಥಾನಗಳಿಗೆ ಏಪ್ರಿಲ್ 12 ರಂದು ಮತದಾನ ನಡೆಯಲಿದೆ, ಏಪ್ರಿಲ್ 16 ರಂದು ಫಲಿತಾಂಶ ಪ್ರಕಟವಾಗಲಿದೆ.