Breaking News

ಭಗವದ್ಗೀತೆ ಪಾಠ ಮಾಡಿದ್ರೆ ಹೊಟ್ಟೆ ತುಂಬಲಿದೆಯೇ!?.H.D.K.

Spread the love

ರಾಮನಗರ : ಸರ್ಕಾರದ ಮುಂದೆ ಟನ್‌ಗಟ್ಟಲೇ ಸಮಸ್ಯೆಗಳ ಸರಮಾಲೆಯೇ ಇದೆ. ಮೊದಲು ಅವುಗಳನ್ನ ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದೆಯೇ ಎಂದು ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರದ ಮುಂದೆ ರಾಜ್ಯದಲ್ಲಿ ಬಗೆಹರಿಸುವ ಸಮಸ್ಯೆಗಳೇ ಸಾವಿರ ಸಂಖ್ಯೆಯಲ್ಲಿ ಇದ್ದಾವೆ. ಮೊದಲಿಗೆ ಆ ಸಮಸ್ಯೆಗಳನ್ನು ಬಗೆಹರಿಸುವ ಕಡೆ ಹೆಚ್ಚು ಗಮನ ಹರಿಸಬೇಕಿದೆ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬಲಿದೆಯೇ ಎಂದು ಪ್ರಶ್ನಿಸಿದರು.

ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದಿದೆ. ಅದರಲ್ಲಿ ಮೊದಲನೇ ಪ್ರಶ್ನೆ ಇದೇ.. ನಾನ್ಯಾರು.. ಎಲ್ಲಿಂದ ಬಂದೆ.. ಎಂಬುದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಏನು.. ಹೋದ್ಮೇಲೆ ಏನು.. ಅನ್ನೋದು ಕೂಡ ಗೊತ್ತಿಲ್ಲ.‌ ಯಾರಿಗೂ ಯಾವುದೂ ಕೂಡ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ ನಿಮಗೆ ಗೊತ್ತಿದೆಯೇ. ಬಿಜೆಪಿಯ ರಾಜ್ಯ-ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ ಎಂದರು.ಇನ್ನು ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದರ ಬಗ್ಗೆ ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನು ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ