Breaking News

ಉಪ್ಪಿ ಕಂಠಸಿರಿಯಲ್ಲಿ ‘ಹುಷಾರ್’ ಹಾಡು

Spread the love

ಚಂದನವನದ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಅಭಿನಯದಷ್ಟೇ, ಗಾಯನದಿಂದಲೂ ಜನಪ್ರಿಯರಾದವರು. ಪ್ರಸ್ತುತ ಉಪೇಂದ್ರ ಅವರು ʼಹುಷಾರ್ʼ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸತೀಶ್ ರಾಜ್ ಬರೆದಿರುವ ʼನೀ ನೋಡೊಕೆ ಸಿಕ್ಸಟಿನ್ ಸ್ವೀಟಿ. ಬಿಟ್ಕೊಳೆ ಒಂದ್ ನೈಂಟಿʼ ಎಂಬ ಹಾಡನ್ನು ಇತ್ತೀಚಿಗೆ ಸಾಧುಕೋಕಿಲ ಅವರ ಸ್ಟುಡಿಯೋದಲ್ಲಿ ಉಪೇಂದ್ರ ಹಾಡಿದ್ದಾರೆ.ಸತೀಶ್ ರಾಜ್ ಮೂವೀ ಮೇಕರ್ಸ್ ಲಾಂಛನದಲ್ಲಿ ಸತೀಶ್ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಶ್ವಿನ್ ಅರುಣ್ ಕೃಷ್ಣ ಈ ಚಿತ್ರದ ಸಹ ನಿರ್ಮಾಪಕರು. 

ಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತೆರಚನೆ ಮಾಡಿರುವ ಸತೀಶ್ ರಾಜ್ ನಿರ್ದೇಶನವನ್ನು ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆಯಲ್ಲಿ ಬಂದಿರುವ ಸತೀಶ್ ರಾಜ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ನಮ್ಮ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರುತ್ತದೆ. ಅದಕ್ಕೆ ಯಾರು ಹೊಣೆಗಾರರಲ್ಲ. ನಾವು ಎಚ್ಚರಿಕೆಯಿಂದ ಇರಬೇಕು ಎನ್ನುವುದು ಕಥೆಯ ಸಾರಾಂಶ. ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಮೇಲಿನ ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯದಲ್ಲೇ ಈ ಹಾಡಿನ ಚಿತ್ರೀಕರಣ ನಡೆಯಲಿದೆ. ಚಿತ್ರ ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿದೆ.


Spread the love

About Laxminews 24x7

Check Also

ಪತ್ರಕರ್ತರಿಗೆ ತರಬೇತಿ: ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌-ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

Spread the loveಬೆಂಗಳೂರು, (ಸೆಪ್ಟೆಂಬರ್‌ 8): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ