Breaking News

ಡಾಕ್ಟರ್​ ಆಗಿ ಬರ್ತಿನಿ ಅಂದಿದ್ಯಲ್ಲೊ: ನವೀನ್​ ತಾಯಿಯ ಅಳಲು

Spread the love

ಹಾವೇರಿ : ಉಕ್ರೇನ್​-ರಷ್ಯಾ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ​ ಸ್ವಗ್ರಾಮ ತಲುಪಿದ್ದು, ವೀರಶೈವ ಸಂಪ್ರದಾಯದ ವಿಧಿ – ವಿಧಾನದಂತೆ ಕುಟುಂಬಸ್ಥರು ಅಂತಿಮ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಈ ವೇಳೆ ನವೀನ್​ ತಾಯಿ ವಿಜಯಲಕ್ಷ್ಮಿ, ಮಗನಿಗೆ ಸೆಲ್ಯೂಟ್​ ಹೊಡೆದರು.

ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ್​ ನಿವಾಸದಲ್ಲಿ ತಂದೆ ಶೇಖರಪ್ಪ, ತಾಯಿ ವಿಜಯಲಕ್ಷ್ಮಿ, ಸಹೋದರ ಹರ್ಷ ಸೇರಿದಂತೆ ಸಂಬಂಧಿಕರು ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ ಸಲ್ಲಿಸಿದರು. ಇದೇ ವೇಳೆ, ಸಹೋದರ ಹರ್ಷ ತಾಯಿಯನ್ನು ಅಪ್ಪಿಕೊಂಡು ಕಣ್ಣೀರಿಟ್ಟರು.

‘ಡಾಕ್ಟರ್​ ಆಗಿ ಬರ್ತಿನಿ ಅಂದಿದ್ಯಲ್ಲೊ, ನಿನಗೆ ಸೆಲ್ಯೂಟ್​ ಕಣೋ’ ಎಂದು ನವೀನ್​ ತಾಯಿ ವಿಜಯಲಕ್ಷ್ಮಿಯವರು, ಮೃತ ಮಗ ನವೀನ್​ಗೆ ಎರಡು ಕೈಯಿಂದ ಸೆಲ್ಯೂಟ್ ಹೊಡೆದು ಕಣ್ಣೀರಿಟ್ಟರು.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ