ಜಮೀನು ಕಳೆದುಕೊಂಡ ಕುಟುಂಬದ ಸದಸ್ಯರಲ್ಲಿ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸ್ಥಾಪಿಸಿದ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಾಗುತ್ತದೆ.- ಸಚಿವ ಮುರುಗೇಶ್ ನಿರಾಣಿ

Spread the love

ಬೆಂಗಳೂರು: ಕೆಐಡಿಬಿಯಿಂದ ಸ್ವಾಧೀನಪಡಿಸಿಕೊಂಡ ಜಮೀನಿಗೆ ರೈತರು ನಗದು ಪರಿಹಾರ ಪಡೆಯದೇ ಇದ್ದಲ್ಲಿ, ಅಭಿವೃದ್ದಿಪಡಿಸಿದ ನಿವೇಶನದಲ್ಲಿ ಪ್ರತಿ ಎಕರೆಗೆ 10,781 ಚ.ಅಡಿ ಜಾಗವನ್ನು ಫಲಾನುಭವಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ವಿಧಾನಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮೊದಲು ಪ್ರತಿ ಎಕರೆಗೆ 9,500 ಚದರ ಅಡಿ ಅಭಿವೃದ್ದಿಪಡಿಸಿದ ಜಾಗವನ್ನು ಭೂ ಮಾಲೀಕರಿಗೆ ನೀಡಲಾಗುತ್ತಿತ್ತು. ಈಗ ಎಕರೆಗೆ 10,781 ಚದರ ಅಡಿ ಜಾಗವನ್ನು ನೀಡಲು ನಿರ್ಧರಿಸಲಾಗಿದೆ ಎಂದರು.

ಜಮೀನು ಕಳೆದುಕೊಂಡ ಕುಟುಂಬದ ಸದಸ್ಯರಲ್ಲಿ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸ್ಥಾಪಿಸಿದ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಭೂಮಿಯ ಬದಲಾಗಿ ಪರ್ಯಾಯ ಭೂಮಿ ನೀಡುವ ವ್ಯವಸ್ಥೆ ದೇಶದಲ್ಲಿ ಎಲ್ಲಿಯೂ ಜಾರಿಯಲ್ಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ನಿರಾಣಿ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

Bigg Boss ಸೀಸನ್​-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು

Spread the love ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ