Breaking News

ಟಿಂಬರ್​ ಡಿಪೋದಲ್ಲಿ ಭಾರಿ ಅಗ್ನಿ ಅವಘಡ.. 11 ಜನರ ಸಜೀವ ದಹನ: ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

Spread the love

ಟಿಂಬರ್​ ಡಿಪೋದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 11 ಜನರ ಸಜೀವ ದಹನಗೊಂಡಿರುವ ಘಟನೆ ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್​ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ನೀಡುವುದಾಗಿ ತೆಲಂಗಾಣ ಸಿಎಂ ಚಂದ್ರಶೇಖರ್​ ರಾವ್​ ಘೋಷಣೆ ಮಾಡಿದ್ದಾರೆ.

ಹೈದರಾಬಾದ್​: ಇಲ್ಲಿನ ಸಿಕಂದರಾಬಾದ್‌ನ ಬೋಯಗುಡದಲ್ಲಿರುವ ಟಿಂಬರ್ ಡಿಪೋದಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, 11 ಜನರು ಸಜೀವ ದಹನವಾಗಿರುವ ದರ್ಘಟನೆ ಬೆಳಕಿಗೆ ಬಂದಿದೆ.

ಟಿಂಬರ್​ ಡಿಪೋದಲ್ಲಿ ಭಾರೀ ಬೆಂಕಿ ಅವಘಡ

ಬೆಳ್ಳಂಬೆಳಗ್ಗೆ ಸಿಕಂದರಾಬಾದ್​ನಲ್ಲಿ ಟಿಂಬರ್​​ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಿಗೆ ಮತ್ತು ಬಿದಿರುಗಳು ಇರುವುದರಿಂದ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಕೂಡಲೇ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ರವಾನಿಸಿದರು. ಸುದ್ದಿ ತಿಳಿದ ತಕ್ಷಣವೇ ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾರಂಭಿಸಿತು. ಆದರೆ ಅಷ್ಟೊತ್ತಿಗಾಗಲೇ 11 ಜನರು ಸಜೀವ ದಹನಗೊಂಡಿದ್ದರು. ಇಬ್ಬರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!!

Spread the love ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!! ನಿರಂತರ ಮಳೆಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ