Breaking News

ಬಟ್ಟೆ ಬ್ಯಾಗ್​ನಿಂದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಎದುರಾಯ್ತು ಸಂಕಷ್ಟ!

Spread the love

ಮೈಸೂರು: ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ರೋಹಿಣಿ ಸಿಂಧೂರಿ ಅವರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೂರ್ವಾನುಮತಿ ಇಲ್ಲದೆ 14.71 ಲಕ್ಷ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌ಗಳನ್ನು 14 ಕೋಟಿ ರೂ.ಗೆ ಖರೀದಿ ಮಾಡಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13 ರೂ.ಗೆ ಸಿಗುವ ಪ್ರತಿ ಬ್ಯಾಗ್‌ಗೆ 52 ರೂ.

ಕೊಡಲಾಗಿದೆ. ಸಾರ್ವಜನಿಕರ ತೆರಿಗೆ ಹಣವನ್ನು ರೋಹಿಣಿ ಸಿಂಧೂರಿ ದುಂದು ವೆಚ್ಚ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದ ಶಾಸಕ ಸಾ.ರಾ.ಮಹೇಶ್, ತನಿಖೆಗೆ ಆಗ್ರಹಿಸಿದ್ದರು.

ಕೈ ಮಗ್ಗ ನಿಗಮ ಬಿಟ್ಟು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡಿ ರೋಹಿಣಿ ಸಿಂಧೂರಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್​ ಖರೀದಿ ನೆಪದಲ್ಲಿ ಒಟ್ಟು 14 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು 11 ತಿಂಗಳ ಹಿಂದೆಯೇ ಸಾ.ರಾ.ಮಹೇಶ್​ ಆರೋಪಿಸಿ ತನಿಖೆಗೆ ಆಗ್ರಹಿಸಿದ್ದರು. ಇದೀಗ ತನಿಖೆ ನಡೆಸಿ ವರದಿ ನೀಡುವಂತೆ ಈಗಿನ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ