Breaking News

ಗ್ರಾಹಕರಿಗೆ ಮತ್ತೆ ಶಾಕ್​: ಎರಡನೇ ದಿನವು ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಏರಿಕೆ,

Spread the love

ನವದೆಹಲಿ: ನಾಲ್ಕೂವರೆ ತಿಂಗಳ ಬಳಿಕ ನಿನ್ನೆ (ಮಾ.22) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ 80 ಪೈಸೆಗಳಷ್ಟು ಏರಿಕೆಯಾಗಿತ್ತು. ಇಂದು (ಮಾ.23) ಮತ್ತೆ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ 80 ಪೈಸೆ ಹೆಚ್ಚಳವಾಗಿದ್ದು, ಸಾಮಾನ್ಯ ಜನರಿಗೆ ಬ್ಯಾಕ್​ ಟು ಬ್ಯಾಕ್​ ಶಾಕ್​ ಎದುರಾಗುತ್ತಿದೆ.

ಒಂದೆಡೆ ಯೂಕ್ರೇನ್​-ರಷ್ಯಾ ಯುದ್ಧದಿಂದ ಖಾದ್ಯ ತೈಲ ಮತ್ತು ಗೋಧಿ ಸೇರಿದಂತೆ ಕೆಲವೊಂದು ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದೀಗ ಇಂಧನ ದರ ಮತ್ತೊಮ್ಮೆ ಏರಿಕೆಯಾಗಿರುವು ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾವು ಮತ್ತೊಮ್ಮೆ ಹೆಚ್ಚಾಗಲಿದ್ದು, ಸಾಮಾನ್ಯ ಜನರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.

ಇಂದು ಬೆಳಗ್ಗೆ 6 ಗಂಟೆಯಿಂದಲೇ ದರ ಏರಿಕೆ ಪರಿಷ್ಕರಣೆಯಾಗಿದ್ದು, ಇಂದಿನ ಇಂಧನ ದರ ಈ ಕೆಳಕಂಡಂತಿದೆ
ದೆಹಲಿ
ಪೆಟ್ರೋಲ್​: ಪ್ರತಿ ಲೀಟರ್​ಗೆ 97.01 ರೂಪಾಯಿ
ಡೀಸೆಲ್​: ಪ್ರತಿ ಲೀಟರ್​ಗೆ 88.27

ಮುಂಬೈ
ಪೆಟ್ರೋಲ್​: 111.58 ರೂ.
ಡೀಸೆಲ್​: 95.74

ಚೆನ್ನೈ
ಪೆಟ್ರೋಲ್​: 102.96 ರೂ.
ಡೀಸೆಲ್​: 92.99

ಕೊಲ್ಕತ
ಪೆಟ್ರೋಲ್​: 106.31 ರೂ.
ಡೀಸೆಲ್​: 91.42

ಬರೋಬ್ಬರಿ 137 ದಿನಗಳವರೆಗೆ ತಟಸ್ಥವಾಗಿದ್ದ ಇಂಧನ ದರ ಇದೀಗ ಏರುಗತಿಯಲ್ಲಿದೆ. ಪಂಚ ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಇಂಧರ ದರದಲ್ಲಿ ಯಾವುದೇ ಬದಲಾವಣೆ ಕಂಡಿರಲಿಲ್ಲ. ಇದೀಗ ಚುನಾವಣೆ ಮುಗಿದ್ದಿದ್ದು, ಮತ್ತೆ ದರ ಏರಿಕೆ ಬಿಸಿ ಗ್ರಾಹಕರಿಗೆ ತಟ್ಟಲಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು ಗ್ರಾಹಕವಾಗಿದೆ. ಭಾರತ ತನ್ನ ತೈಲ ಅಗತ್ಯದ ಸುಮಾರು 85% ನಷ್ಟು ಭಾಗವನ್ನು ಸಾಗರೋತ್ತರ ಮಾರುಕಟ್ಟೆಗಳಿಂದ ತರಿಸಿಕೊಳ್ಳುತ್ತಿದೆ.

ಸ್ಥಳೀಯ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಅಂತರಾಷ್ಟ್ರೀಯ ಬೆಲೆಗಳಿಗೆ ಸಂಬಂಧಿಸಿವೆ. ಇದು ಕಚ್ಚಾ ತೈಲ ಬೆಲೆಗಳ ಮೇಲೆ ನಿರ್ಧಾರವಾಗಿರುತ್ತದೆ. ರಷ್ಯಾ ಮತ್ತು ಉಕ್ರೇನ್​ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚ್ಛಾ ತೈಲದ ಬೆಲೆ ಏರಿಕೆಯಾಗಿದ್ದು, ಇದು ಜಾಗತಿಕ ತೈಲ ಬೆಲೆಗಳ ಮೇಲೆ ಗಣನೀಯ ಪ್ರಭಾವ ಬೀರಿದೆ. ಅಲ್ಲದೆ, ಯುಎಸ್​ ಡಾಲರ್​ ಎದುರು ರೂಪಾಯಿ ಮೌಲ್ಯ ಕುಸಿದಿರುವುದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ.


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ