Breaking News

ಅಕ್ರಮ ಆಸ್ತಿ ಗಳಿಕೆ: ಸಚಿವ ಸೋಮಣ್ಣ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

Spread the love

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆ ಹಿನ್ನೆಲೆಯಲ್ಲಿ ವಸತಿ ಸಚಿವ ವಿ.ಸೋಮಣ್ಣಗೆ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ನೋಟಿಸ್​ ನೀಡಿದೆ. ಹೀಗಾಗಿ, ತಕ್ಷಣವೇ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ಮುಖ್ಯಮಂತ್ರಿಗಳೇ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಸಿದ್ದರಾಮಯ್ಯ ವಿಷಯ ಪ್ರಸ್ತಾಪಿಸಿ, ರಾಮಕೃಷ್ಣ ಎಂಬುವರು ಸಲ್ಲಿಸಿರುವ ಖಾಸಗಿ ದೂರಿನ ಹಿನ್ನೆಲೆಯಲ್ಲಿ ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯವು ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಸಂಬಂಧಿಸಿದಂತೆ ಸಚಿವ ಸೋಮಣ್ಣ ಅವರಿಗೆ ಏಪ್ರಿಲ್ 16 ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದೆ.

ಅಲ್ಲದೆ, ಭ್ರಷ್ಟಚಾರ ನಿಗ್ರಹ ದಳ (ಎಸಿಬಿ) ಡಿವೈ ಎಸ್ ಪಿ ಸಲ್ಲಿಸಿದ್ದ ‘ಬಿ ರಿಪೋರ್ಟ್’ ಅನ್ನು ವಜಾಗೊಳಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಮತ್ತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸಲು ಆದೇಶಿಸಿದೆ. ಹಾಗಾಗಿ, ಆರೋಪಿ ಸ್ಥಾನದಲ್ಲಿರುವ ಸೋಮಣ್ಣ ಹೇಗೆ ಸಚಿವರಾಗಿ ಮುಂದುವರೆಯಲು ಸಾಧ್ಯ, ಅವರಾಗೇ ರಾಜೀನಾಮೆ ನೀಡಬೇಕು. ಇಲ್ಲ ಅವರನ್ನು ಪದಚ್ಯುತಗೊಳಿಸಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ