Breaking News

ಜಮೀರ್ ಒಂದು ಮಾತು ಹೇಳ್ತೀನಿ, ಮುಂದೆ ನೀವು ಆರ್‌ಎಸ್‍ಎಸ್‍ ಒಪ್ಪಿಕೊಳ್ಳಬೇಕಾಗುತ್ತದೆ : ಸ್ಪೀಕರ್

Spread the love

ಬೆಂಗಳೂರು: ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಯುವಾಗ ಆರ್‌ಎಸ್‍ಎಸ್‍ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು. ಈ ವೇಳೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಜಮೀರ್ ಒಂದು ಮಾತು ಹೇಳ್ತೀನಿ, ಮುಂದೆ ನೀವು ಆರ್‌ಎಸ್‍ಎಸ್‍ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಚರ್ಚೆ ವೇಳೆ ಸಿದ್ದರಾಮಯ್ಯ ಮಾತನಾಡುವಾಗ ಅಶೋಕನ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯ ಇದೆ. ರಾಜಕೀಯ ಬೇರೆ, ಹೀ ಈಸ್ ಎ ಗುಡ್ ಹ್ಯೂಮನ್ ಬೀಯಿಂಗ್, ಆಮೇಲೆ ಬಿಜೆಪಿ, ಆರ್‌ಎಸ್‍ಎಸ್‍, ಕಾಂಗ್ರೆಸ್ ಎಲ್ಲಾ ಎಂದು ತಿವಿದರು. ಆಗ ಮಧ್ಯಪ್ರವೇಶ ಮಾಡಿದ ಅಶೋಕ್ ಮತ್ತೆ ಆರ್‌ಎಸ್‍ಎಸ್‍ಗೆ ಹೋಗ್ತೀರಲ್ಲಾ ಸಾರ್..? ಎಂದು ತಿರುಗೇಟು ನೀಡಿದರು.

ಆ ವೇಳೆ ಸ್ಪೀಕರ್ ಮಧ್ಯಪ್ರವೇಶ ಮಾಡಿ ನೀವು ಯಾಕೆ ನಮ್ಮ ಆರ್‌ಎಸ್‍ಎಸ್‍ ಬಗ್ಗೆ ಅಷ್ಟು ಬೇಸರ ಮಾಡ್ಕೊಳ್ತೀರಿ? ಎಂದು ಹೇಳಿದರು. ಆಗ ಸಿದ್ದರಾಮಯ್ಯ ಮಾತನಾಡಿ, ಬೇಸರನೇ ಮಾಡ್ಕೊಂಡಿಲ್ಲಾ, ಆರ್‌ಎಸ್‍ಎಸ್‍ ಎನ್ನುವುದು ರಾಷ್ಟ್ರೀಯ ಸೇವಾ ಸಂಘ, ಅದು ಹೇಳೋದು ತಪ್ಪಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದಾಗ ಆರ್‍ಎಸ್‍ಎಸ್ ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದು ಸ್ಪೀಕರ್ ಹೇಳಿದರು.

ಆರ್‌ಎಸ್‍ಎಸ್‍ ಬಗ್ಗೆ ಸ್ಪೀಕರ್ ಮಾತನಾಡುತ್ತಿದ್ದಂತೆ ಎದ್ದು ನಿಂತ ಜಮೀರ್ ಅಹಮದ್ ಪೀಠ ಮೇಲೆ ಕೂತ್ಕೊಂಡು ನಮ್ಮ ಆರ್‍ಎಸ್‍ಎಸ್ ಅಂತೀರಾ ತಾವು? ಎಂದು ಟಾಂಗ್ ಕೊಟ್ಟರು. ಆಗ ಸ್ವಲ್ಪ ಏರು ಧ್ವನಿಯಲ್ಲಿ ಮಾತನಾಡಿದ ಸ್ಪೀಕರ್ ಕಾಗೇರಿ, ಇನ್ನೇನು ಮತ್ತೆ? ನಮ್ಮ ಅರ್‍ಎಸ್‍ಎಸ್ಸೆ!. ಆರ್‍ಎಸ್‍ಎಸ್ ನಮ್ದೇ ರೀ. ಜಮೀರ್ ಒಂದು ಮಾತು ಹೇಳ್ತೀನಿ, ಇವತ್ತಲ್ಲಾ ನಾಳೆ ನಮ್ಮ ದೇಶದಲ್ಲಿ ನೀವೂ ಸಹ ನಮ್ಮ ಆರ್‍ಎಸ್‍ಎಸ್ ಎಂದು ಹೇಳಬೇಕಾಗುತ್ತದೆ. ಖಂಡಿತವಾಗಿ ಹೇಳಬೇಕಾಗುತ್ತದೆ ಎಂದು ಜಮೀರ್ ಗೆ ಸ್ಪೀಕರ್ ತಿವಿದರು.


Spread the love

About Laxminews 24x7

Check Also

ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್

Spread the loveಬೆಂಗಳೂರು: ಕೋವಿಡ್​​ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ