Breaking News

ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ; ಓರ್ವನ ದುರ್ಮರಣ, ಮೂವರಿಗೆ ಗಾಯ

Spread the love

ಬೆಳಗಾವಿ: ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟದ ಹೊರವಲಯದಲ್ಲಿ ಸಂಭವಿಸಿದೆ.

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಮುರಗೋಡ ಗ್ರಾಮದ ಸಂಜಯ ಜಯಸಿಂಗ್ ಚೌಗಲೆ (58) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ