Breaking News

ಅಂಗವೈಕಲ್ಯ ಮೆಟ್ಟಿ ನಿಂತು ಸಾಧನೆಯ ಶಿಖರದತ್ತ ಹುಬ್ಬಳ್ಳಿ ಹೈದನ ದಿಟ್ಟ ಹೆಜ್ಜೆ

Spread the love

ಹುಬ್ಬಳ್ಳಿ: ಸಣ್ಣದೊಂದು ಅಂಗವೈಕಲ್ಯ ಇಡೀ ಜೀವನವನ್ನೇ ಅಂಧಕಾರಕ್ಕೆ ತಳ್ಳಿ ಬಿಡುತ್ತದೆ‌.‌ ಆದ್ರೆ ಹುಬ್ಬಳ್ಳಿಯ ಹುಡುಗನೊಬ್ಬ ತನ್ನ ಜೀವನದಲ್ಲಾದ ಒಂದು ಅವಘಡದಿಂದ ಮತ್ತೆ ಫೀನಿಕ್ಸ್ ಪಕ್ಷಿಯಂತೆ ಮೈಕೊಡವಿ ಮೇಲೆದ್ದು ಬಂದ. ಅಂಗವೈಕಲ್ಯ ಇದ್ದವರು ಕೂಡಾ ಏನು ಬೇಕಾದ್ರೂ ಸಾಧಿಸಬಹುದು ಎಂಬುದನ್ನು ನಿರೂಪಿಸಿ, ಸಾಧಿಸಿ ತೋರಿಸುತ್ತಿದ್ದಾನೆ.26 ಬಾರಿ ಶಸ್ತ್ರಚಿಕಿತ್ಸೆ: ಈ ಬಾಲಕ ವಾಣಿಜ್ಯನಗರಿ ಹುಬ್ಬಳ್ಳಿಯ ನಿವಾಸಿ ಮಂಜುನಾಥ ಬಳ್ಳಾರಿ ಎಂಬುವವರ ಪುತ್ರ. ಹೆಸರು ಸಿದ್ಧಾರ್ಥ ಬಳ್ಳಾರಿ. ಸಾಧನೆ ಮಾಡಬೇಕು ಅಂದರೆ ಅದಕ್ಕೆ ಸಾಧಿಸುವ ಛಲವೊಂದಿದ್ದರೆ ಸಾಕು, ಎಂತಹದ್ದೇ ಸಮಸ್ಯೆ ಎದುರಾದರೂ ಗೆಲ್ಲಬಹುದು ಎಂಬುದನ್ನು ತೋರಿಸಿಕೊಟ್ಟ ಸಾಧಕ ಈತ.

26 ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾದ ಈತನ ದೇಹದಲ್ಲಿ ಸುಮಾರು 6,500ಕ್ಕೂ ಅಧಿಕ ಹೊಲಿಗೆಗಳಿವೆ. ಆದರೂ ಛಲ ಬಿಡದೆ ಅಂತರರಾಷ್ಟ್ರೀಯ ಐಎಸ್ಎಫ್ ಕ್ರೀಡಾಕೂಟಕ್ಕೆ ಆಯ್ಕೆಯಾದ್ದಾನೆ. ಇದೀಗ ದೇಶವನ್ನು ಹೆಮ್ಮೆಯಿಂದ ಪ್ರತಿನಿಧಿಸುತ್ತಿದ್ದಾನೆ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ