ಬೆಂಗಳೂರು: ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್‍ನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರಕಿಸುವುದು ಹಾಗೂ ಒಂದೇ ಬಾರಿಗೆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಮಿತಿ ರಚಿಸಲಾಗಿದೆ ಎಂದರು.
Laxmi News 24×7