Breaking News

ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಸರ್ಕಲ್​ ಇನ್ಸ್​ಪೆಕ್ಟರ್​ ಪರಾರಿ: ಬಯಲಾಯ್ತು ಸಿಐ ಕರಾಳ ಮುಖ

Spread the love

ತಿರುಪತಿ: ಕರ್ನೂಲ್​ ತಾಲೂಕು ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಲ್​ ಇನ್ಸ್​ಪೆಕ್ಟರ್​ ಒಬ್ಬರು ಠಾಣೆಯಲ್ಲಿದ್ದ 15 ಲಕ್ಷ ರೂಪಾಯಿ ಹಣದ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದ್ದು, ಕರ್ನೂಲ್​ ಜಿಲ್ಲಾ ಪೊಲೀಸ್​ ವಿಭಾಗ ತಲೆಮರೆಸಿಕೊಂಡಿರುವ ಪೊಲೀಸ್​ ಇನ್ಸ್​ಪೆಕ್ಟರ್​ ಪತ್ತೆಗೆ ಶುಕ್ರವಾರ ಬಲೆ ಬೀಸಿದ್ದಾರೆ.

 

ಮೂಲಗಳ ಪ್ರಕಾರ, ಸರ್ಕಲ್​ ಇನ್ಸ್​ಪೆಕ್ಟರ್​ ಹೆಸರು ಕಂಬಗಿರಿ ರಾಮುಡು ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ನಗರದ ಹೊರವಲಯದ ಪಂಚಲಿಂಗಲ ಚೆಕ್​ಪೋಸ್ಟ್​ ಬಳಿ ತಮಿಳುನಾಡು ಮೂಲದ ಸತೀಶ್​ ಬಾಲಕೃಷ್ಣನ್​ ಎಂಬುವರಿಗೆ ಸೇರಿದ ವಾಹನವೊಂದರ ತಪಾಸಣೆ ಮಾಡುವಾಗ ವಶಕ್ಕೆ ಪಡೆಯಲಾದ ಒಟ್ಟು 75 ಲಕ್ಷ ರೂ. ಹಣದಲ್ಲಿ 15 ಲಕ್ಷ ರೂ. ಹಣವನ್ನು ತೆಗೆದುಕೊಂಡು ರಾಮುಡು ಪರಾರಿಯಾಗಿದ್ದಾರೆ.

ವಶಕ್ಕೆ ಪಡೆದ ಹಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಿದರೂ ಸರ್ಕಲ್​ ಇನ್ಸ್​ಪೆಕ್ಟರ್​ ರಾಮುಡು, ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ 15 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಸತೀಶ್ ಬಾಲಕೃಷ್ಣನ್ ಗುರುವಾರ ತಡರಾತ್ರಿ ಕರ್ನೂಲ್ ತಾಲೂಕು ಪೊಲೀಸ್ ಠಾಣೆಯಲ್ಲಿ ಔಪಚಾರಿಕವಾಗಿ ದೂರು ದಾಖಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಸತೀಶ್​ ಬಾಲಕೃಷ್ಣನ್​ ಅವರು ತಮಿಳುನಾಡಿನ ತಿರ್ಪ್ಪುರ್​ ಮೂಲದವರು. ಭಾನುವಾರ ಖಾಸಗಿ ಬಸ್​ ಒಂದರಲ್ಲಿ ಹೈದರಾಬಾದ್​ನಿಂದ ಮದುರೈಗೆ ಹಣವನ್ನು ಸಾಗಿಸುತ್ತಿದ್ದರು. ಈ ವೇಳೆ ಪಂಚಲಿಂಗಲ ಚೆಕ್​ಪೋಸ್ಟ್​ ಬಳಿ ಬಸ್​ ತಡೆದು ತಪಾಸಣೆ ಮಾಡುವಾಗ ಸತೀಶ್​ ಬಳಿ 75 ಲಕ್ಷ ರೂ. ಭಾರೀ ಮೊತ್ತ ಇದ್ದಿದ್ದರಿಂದ ನಗದು ಸಮೇತ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆಂದು ಕರ್ನೂಲ್ ತಾಲೂಕು ಪೊಲೀಸರಿಗೆ ಒಪ್ಪಿಸಲಾಯಿತು.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ