ಬೆಂಗಳೂರು: ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆಯಾದರೂ ಸಕ್ರಿಯ ರಾಜಕಾರಣದಲ್ಲಿರುತ್ತೇನೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಬಹಳಷ್ಟು ಕ್ಷೇತ್ರದ ನಾಯಕರು ತಮ್ಮಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ.
ನಾನು ಇನ್ನೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಈಗಾಗಲೇ ಈ ಬಗ್ಗೆ ತೀರ್ಮಾನ ಮಾಡಲ್ಲ ಎಂದು ಹೇಳಿದರು.