ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನ 15ನೇ ಆವೃತ್ತಿಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರನ್ನರ್ ಅಪ್ ತಂಡ ಕೋಲ್ಕತ್ತಾ ನೈಟ್ ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬೌಲಿಂಗ್ ಆಯ್ದುಕೊಂಡಿದೆ. ಮುಂಬೈನ ವಾಖೆಂಡೆ ಮೈದಾನದಲ್ಲಿ ಪಂದ್ಯ ಆರಂಭಗೊಂಡಿದೆ.
ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿರುವ ಶ್ರೇಯಸ್ ಅಯ್ಯರ್ ಕೋಲ್ಕತ್ತಾ ನೈಟ್ ರೈಡರ್ಸ್ ಮುನ್ನಡೆಸುತ್ತಿದ್ದು, ಆಲ್ರೌಂಡರ್ ರವೀಂದ್ರ ಜಡೇಜಾ ಸಿಎಸ್ಕೆ ತಂಡದ ನಾಯಕತ್ವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಉಭಯ ತಂಡದ ನಾಯಕತ್ವ ಯುವ ಆಟಗಾರರು ಹೊತ್ತುಕೊಂಡಿರುವ ಕಾರಣ ಇಂದಿನ ಪಂದ್ಯದಲ್ಲಿ ಗೆಲುವು ದಾಖಲು ಮಾಡುವುದರೊಂದಿಗೆ ಅಭಿಯಾನ ಆರಂಭ ಮಾಡುವ ಇರಾದೆ ಹೊಂದಿದ್ದಾರೆ.
ಕೆಕೆಆರ್ ತಂಡ ಆಡುವ 11ರ ಬಳಗದಲ್ಲಿ ವಿದೇಶಿ ಆಟಗಾರರಾದ ಸ್ಯಾಮ್ ಬಿಲ್ಲಿಂಗ್ಸ್, ಆಂಡ್ರೆ ರಸೆಲ್, ಸುನಿಲ್ ನರೈನ್ಗೆ ಮಣೆ ಹಾಕಿದ್ದು, ಚೆನ್ನೈ ನಾಲ್ಕು ವಿದೇಶಿ ಆಟಗಾರರಾದ ಕಾನ್ವೇ, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆಗೆ ಕಣಕ್ಕಿಳಿಸಿದೆ. ಕಳೆದ ವರ್ಷದ ಆವೃತ್ತಿಯಲ್ಲಿ ಚೆನ್ನೈ ವಿರುದ್ಧ ಕೆಕೆಆರ್ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ.