Breaking News

RRR ಸಿನಿಮಾದಲ್ಲಿ ತಾಂತ್ರಿಕ ದೋಷ – ಚಿತ್ರಮಂದಿರದ ಗಾಜು ಪುಡಿ ಪುಡಿ

Spread the love

ದಾವಣಗೆರೆ: ತ್ರಿಬಲ್ ಆರ್ ಸಿನಿಮಾ ಭಾರತದಾತ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಆದರೆ ದಾವಣಗೆರೆಯಲ್ಲಿ ಸಿನಿಮಾ ಪ್ರದರ್ಶನದ ವೇಳೆ ತಾಂತ್ರಿಕ ದೋಷ ಕಂಡುಬಂದು ಅಭಿಮಾನಿಗಳು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆ ಇಡೀ ಚಿತ್ರಮಂದಿರದ ಗಾಜನ್ನು ಪುಡಿ-ಪುಡಿ ಮಾಡಿರುವ ಘಟನೆ ಶುಕ್ರವಾರ(ನಿನ್ನೆ) ರಾತ್ರಿ ಜಗಳೂರಿನ ಭಾರತ ಚಿತ್ರಮಂದಿರದಲ್ಲಿ ನಡೆದಿದೆ.

ಜಗಳೂರು ತಾಲೂಕಿನ ಭಾರತ ಚಿತ್ರಮಂದಿರದಲ್ಲಿ ಕಳೆದ ದಿನ ಬೆಳಗ್ಗೆಯಿಂದ ಮೂರ್ನಾಲ್ಕು ಶೋ ತ್ರಿಬಲ್ ಆರ್ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಂಡಿತ್ತು. ಕಳೆದ ದಿನ ಮೂರನೇ ಶೋ ಪ್ರದರ್ಶನದ ವೇಳೆ ತಾಂತ್ರಿಕ ದೋಷದಿಂದ ವೀಡಿಯೋ ಕಟ್ ಕಟ್ ಆಗಿ ಬರುವುದಲ್ಲದೆ ಸೌಂಡ್ ಎಫೆಕ್ಟ್ ಬಾರದಿರುವುದಕ್ಕೆ ಅಭಿಮಾನಿಗಳು ಕೋಪಗೊಂಡಿದ್ದಾರೆ. ಪರಿಣಾಮ ಚಿತ್ರಮಂದಿರದ ಪಿಓಪಿ ಶೀಟ್ ಹಾಗೂ ಕೆಲವು ವಸ್ತುಗಳನ್ನು ಮುರಿದು ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ