Breaking News

BREAKING ತಿರುಪತಿ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮದ್ವೆ ಬಸ್​ ಪಲ್ಟಿಯಾಗಿ 8 ಸಾವು.. 55 ಮಂದಿ ಗಂಭೀರ

Spread the love

ಮದುವೆ ಬಸ್ 50 ಅಡಿ ಆಳದ ಕಂದಕಕ್ಕೆ ಬಿದ್ದಿರುವ ದುರ್ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ತಾಲೂಕಿನ ಬಾಕರಪೇಟೆ ರಸ್ತೆಯಲ್ಲಿ ನಡೆದಿದೆ. ಮದನಪಲ್ಲಿ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಭಾಕರಪೇಟ ಪಾಸ್‌ನ ಮುಖ್ಯ ತಿರುವಿನಲ್ಲಿ ಅನಾಹುತ ಸಂಭವಿಸಿದೆ.

ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ರಕ್ಷಣಾ ಸಿಬ್ಬಂದಿ ಏಳು ಜನರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಾಲಿಶೆಟ್ಟಿ ವೆಂಗಪ್ಪ, ಮಾಲಿಶೆಟ್ಟಿ ಮುರಳಿ, ಕಾಂತಮ್ಮ, ಮಾಲಿಶೆಟ್ಟಿ ಗಣೇಶ್, ಜೆ.ಪಿ.ಯಶಸ್ವಿನಿ ಚಾಲಕ ನಬಿ ರಸೂಲ್, ಕ್ಲೀನರ್ ಶವವನ್ನ ಗುರುತಿಸಲಾಗಿದೆ.

ದುರ್ಘಟನೆಯಲ್ಲಿ 55 ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಗಾಯಾಳುಗಳನ್ನು ತಿರುಪತಿ ರುವಾ ಮತ್ತು ಸ್ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

 


Spread the love

About Laxminews 24x7

Check Also

ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲು ಧನಂಜಯನ ಆಯ್ಕೆ ಬಹುತೇಕ ಖಚಿತ

Spread the loveಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಅನ್ನೋ ಕುತೂಹಲಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ