ಕೋಲಾರ, ಮಾರ್ಚ್”ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕಸಿದ್ದರಾಮಯ್ಯಅವರೇ ಮೂಲ ಕಾರಣ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.
ಕುಮಾರಸ್ವಾಮಿ ಆರೋಪಿಸಿದರು.
ಭಾನುವಾರ ಕೋಲಾರದಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ ಒಂದು ಧರ್ಮದ ಜನರಿಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ, ಹಿಜಾಬ್, ಕೇಸರಿ ಶಾಲು ಅಂತ ಹೇಳಿ ಶಾಲೆ ಕಾಲೇಜುಗಳಲ್ಲಿ ಸಂಘರ್ಷ ಉಂಟು ಮಾಡಲಾಯಿತು. ಇದೆಲ್ಲಕ್ಕೂ ಕಾರಣ ಆ ಮಹಾನುಭಾವವರೇ (ಸಿದ್ದರಾಮಯ್ಯ) ಕಾರಣ” ಎಂದು ದೂರಿದರು.
“2018ರಲ್ಲಿ ರಚನೆಯಾದ ಮೈತ್ರಿ ಸರಕಾರದ ಪತನಕ್ಕೆ ಕಾರಣರಾದ ಸಿದ್ದರಾಮಯ್ಯ ಬಿಜೆಪಿ ಸರಕಾರ ಬರಲು ಸಹಕಾರ ನೀಡಿದರು. ರಾಜ್ಯದ ಹಿತದೃಷ್ಟಿಯಿಂದ ನಮಗೆ ಇಷ್ಟವಿಲ್ಲದಿದ್ದರೂ ಕಾಂಗ್ರೆಸ್ ಜತೆ ಸರಕಾರ ಮಾಡಲು ಒಪ್ಪಿಕೊಂಡೆವು. ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ನಾವು ಅವರ ಜತೆ ಕೈಜೋಡಿಸಿದೆವು. 2004ರಲ್ಲೂ ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೆವು. ಆಗ ನಮ್ಮನ್ನು ಅಪಮಾನಿಸಿ ಚಿತ್ರಹಿಂಸೆ ನೀಡಿದರು. ಆಗ ಅನಿವಾರ್ಯವಾಗಿ ನಾವು ಬೇರೆ ತೀರ್ಮಾನಗಳನ್ನು ಮಾಡಬೇಕಾಯಿತು. ಅದಕ್ಕೂ ಸಿದ್ದರಾಮಯ್ಯನವರೇ ಮೂಲ ಕಾರಣ” ಎಂದು ಕುಮಾ2018ರ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪಕ್ಷವೂ ಬಿಜೆಪಿಯ ಬೀ ಟೀಂ ಎಂದು ಅಪಪ್ರಚಾರ ಮಾಡಿದರು. ಹೀಗಾಗಿ ಬಿಜೆಪಿ 105 ಕ್ಷೇತ್ರಗಳಲ್ಲಿ ಗೆದ್ದಿತು. ಇಲ್ಲವಾಗಿದ್ದಿದ್ದರೆ ಅವರು 75 ಸ್ಥಾನಗಳ ಒಳಗೇ ಇರುತ್ತಿದ್ದರು. ಈಗ ಅವರು ಇದೇ ಮಹಾನುಭಾವರ ಸಹಕಾರದಿಂದ ಅಧಿಕಾರಕ್ಕೆ ಬಂದು ರಾಜ್ಯದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ.