Breaking News

ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವು

Spread the love

ಹಾವೇರಿ : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಗೀತಾ ದಾವಣಗೆರೆ (34) ಮತ್ತು ಮಂಜುಳಾ (36) ಎಂದು ಗುರುತಿಸಲಾಗಿದೆ. ಮೃತರು ದಾವಣಗೆರೆ ಮೂಲದವರು ಎಂದು ತಿಳಿದುಬಂದಿದೆ. ಲಾರಿಯನ್ನು ಓವರ್ ಟೇಕ್ ಮಾಡಲು ಹೋದಾಗ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.

ದಾವಣಗೆರೆಯಿಂದ ಕಾರವಾರಕ್ಕೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಣೆಬೆನ್ನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ