Breaking News

ಇಂದು, ನಾಳೆ ಭಾರತ್ ಬಂದ್ ಗೆ ಕರೆ: ದೇಶಾದ್ಯಂತ ಮುಷ್ಕರ: ಬ್ಯಾಂಕ್ ಸೇರಿ ಹಲವು ಸೇವೆ ವ್ಯತ್ಯಯ

Spread the love

ನವದೆಹಲಿ: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಕಾರ್ಮಿಕ, ರೈತ ವಿರೋಧಿ, ಜನವಿರೋಧಿ ಮತ್ತು ರಾಷ್ಟ್ರವಿರೋಧಿ ನೀತಿಗಳ ವಿರುದ್ಧ ಒಕ್ಕೂಟಗಳು ಎರಡು ದಿನಗಳ ಅಖಿಲ ಭಾರತ ಮುಷ್ಕರವನ್ನು ಘೋಷಿಸಿವೆ.

ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ. ಇಂದು ಮತ್ತು ನಾಳೆ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು.

ರೈಲ್ವೇ ಮತ್ತು ರಕ್ಷಣಾ ವಲಯದ ಒಕ್ಕೂಟಗಳು ಕೂಡ ಮುಷ್ಕರವನ್ನು ಬೆಂಬಲಿಸಿವೆ. ಕಲ್ಲಿದ್ದಲು, ಉಕ್ಕು, ತೈಲ, ಟೆಲಿಕಾಂ, ಅಂಚೆ, ಆದಾಯ ತೆರಿಗೆ, ತಾಮ್ರ ಮತ್ತು ವಿಮೆಯಂತಹ ವಿವಿಧ ಕ್ಷೇತ್ರಗಳ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವುದರಿಂದ ಅನೇಕ ಸೇವೆಯಲ್ಲಿ ವ್ಯತ್ಯಯವಾಗಲಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ