Breaking News

ಕೆಎಸ್‌ಆರ್‌ಟಿಸಿ ಬಸ್- ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ದಂಪತಿ ಸಾವು

Spread the love

ತುಮಕೂರು: ಮಧುಗಿರಿ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರ ಪಾಳ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿಯೇ ದಂಪತಿ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ಬೈಕ್‌ನಲ್ಲಿ ಸಾಗುತ್ತಿದ್ದ ತಾಲ್ಲೂಕಿನ ಗೊಂದಿಹಳ್ಳಿಯ ಶಾಂಭಶಿವಯ್ಯ( 73) ಹಾಗೂ ಶಂಕರಮ್ಮ (67) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

 

ತುಮಕೂರಿನಿಂದ ಬರುತ್ತಿದ್ದ ಬೈಕ್‌ಗೆ ಮಧುಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕವಾಡಿಗರ ಪಾಳ್ಯದ ಸಮೀಪ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಬಸ್‌ ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ