Breaking News

ಚಾಮರಾಜನಗರ ಹಾಲಿ ನಗರಸಭಾ ಸದಸ್ಯನಿಗೆ ಜೈಲು ಶಿಕ್ಷೆ

Spread the love

ಚಾಮರಾಜನಗರ: ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದರ ಜೊತೆಗೆ ನಗರಸಭೆ ಆಯುಕ್ತರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನಗರಸಭೆಯ ಹಾಲಿ ಸದಸ್ಯ ಆರ್‌.ಪಿ.ನಂಜುಂಡಸ್ವಾಮಿಗೆ ಚಾಮರಾಜನಗರದ ನ್ಯಾಯಾಲಯ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ.

 

2010ರ ನವೆಂಬರ್‌ 10ರಂದು ಈ ಪ್ರಕರಣ ನಡೆದಿತ್ತು. ಆರ್‌.ಪಿ.ನಂಜುಂಡಸ್ವಾಮಿ ಅವರು ಆಗ ನಗರಸಭೆಯ ಸದಸ್ಯರಾಗಿದ್ದರು. ಈಗಲೂ ಅವರು 15ನೇ ವಾರ್ಡ್‌ ಸದಸ್ಯರಾಗಿದ್ದಾರೆ. ಅವರ ವಿರುದ್ಧ ಅಂದಿನ ನಗರಸಭೆ ಆಯುಕ್ತ ಎಸ್‌.ಪ್ರಕಾಶ್‌ ಅವರು ‍ಪೊಲೀಸರಿಗೆ ದೂರು ನೀಡಿದ್ದರು.

ಅದು ಏನೆಂದರೆ 2010ರ ನವೆಂಬರ್‌ 10ರಂದು ನಗರದ ಹೊರವಲಯದ ಯಡಬೆಟ್ಟದಲ್ಲಿ ನಗರಸಭೆಯ ವತಿಯಿಂದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿತ್ತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾಗಿದ್ದ ನಂಜುಂಡಸ್ವಾಮಿ ಅವರು ಹಳೆ ಕಾಮಗಾರಿಗಳ ಲೆಕ್ಕವನ್ನು ಕೇಳುವ ನೆಪದಲ್ಲಿ ಆಯುಕ್ತರಾಗಿದ್ದ ಎಸ್‌.ಪ್ರಕಾಶ್‌ ಅವರೊಂದಿಗೆ ಜಗಳ ತೆಗೆದಿದ್ದರು. ಅಲ್ಲದೆ, ನಂಜುಂಡಸ್ವಾಮಿ ಅವರು ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದರ ಜೊತೆಗೆ, ಆಯುಕ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಎಸ್‌.ಪ್ರಕಾಶ್‌ ಅವರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.

ನಂಜುಂಡಸ್ವಾಮಿ ವಿರುದ್ಧ ಐಪಿಸಿ 353 (ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ) 504 (ಅಪರಾಧ ಕೃತ್ಯ ಕೈಗೊಳ್ಳಲು ಪ್ರಚೋದನೆ) ಮತ್ತು 506ರ (ಕೊಲೆ ಬೆದರಿಕೆ) ಅಡಿ ಪೊಲೀಸರು ಪ್ರಕರಣ ದಾಖಲಿಸಿ, ಠಾಣೆಯ ಅಂದಿನ ಸಬ್‌ ಇನ್ಸ್ ಪೆಕ್ಟರ್‌ ಬಿ.ಜಿ.ಕುಮಾರ್‌ ಅವರು ನಗರಸಭಾ ಸದಸ್ಯರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.


Spread the love

About Laxminews 24x7

Check Also

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

Spread the loveಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ