Breaking News

ಶಾಲಾ ಶುಲ್ಕ ಬಾಕಿ ಕಾರಣಕ್ಕೆ ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ:ಸಚಿವ ಬಿ.ಸಿ. ನಾಗೇಶ್

Spread the love

ಬೆಂಗಳೂರು: ಶಾಲಾ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಶಿಕ್ಷಣ ಇಲಾಖೆ ಅಧಿಕಾರಿಗಳ ಮೂಲಕ ಆಯಾ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

 

ಸದನದಲ್ಲಿ ಶಾಸಕ ಆರ್.ರಂಗನಾಥ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಖಾಸಗಿ ಅನುದಾನಿತ ಶಾಲೆಗಳಲ್ಲಿ ಶುಲ್ಕ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಿಸಬಾರದು.

ಹಾಲ್ ಟಿಕೆಟ್ ಕೊಡದೇ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಲಾಗುತ್ತಿದ್ದು, ಕೆಲವು ಶಾಲೆಗಳಲ್ಲಿ ಬೆದರಿಕೆ ಹಾಕಲಾಗುತ್ತಿದೆ. ಪೋಷಕರು, ವಿದ್ಯಾರ್ಥಿಗಳು ಸಂಕಷ್ಟದ ಬಗ್ಗೆ ಗಮನ ಹರಿಸಬೇಕೆಂದು ಶಾಸಕ ಆರ್. ಮಂಜುನಾಥ್ ಒತ್ತಾಯಿಸಿದಾಗ, ಸಚಿವರು ಪ್ರತಿಕ್ರಿಯೆ ನೀಡಿ, ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ