ಬೆಂಗಳೂರು: ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳಾ ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೆಂಪಾಪುರ ನಿವಾಸಿ ನಿಖೀಲಾ(37) ಮೃತ ಟೆಕಿ.ನಿಖೀಲಾ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ಪತಿ ಅರ್ಜುನ್ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು. ಬುಧವಾರ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದು, ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7