Breaking News

ನಾಲ್ಕು ದಿನಗಳ ಹಿಂದೆ ಸಿದ್ದಗೌಡ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿ

Spread the love

ಬೆಳಗಾವಿ: ಕೊಲೆ ಪ್ರಕರಣವೊಂದರಲ್ಲಿ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹ ಸೇರಿರುವ ವಿಚಾರಣಾಧೀನ ಕೈದಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೂಳೆ ಗ್ರಾಮದ ಸಿದ್ದಗೌಡ ಹಿಪ್ಪಲಕರ್ (34) ಆತ್ಮಹತ್ಯೆಗೆ ಶರಣಾಗಿರುವ ಕೈದಿ. ಪಕ್ಕದ ಮನೆಯ ಮಗುವನ್ನು ಕೊಲೆಗೈದ ಆರೋಪ ಈತನ ಮೇಲಿದೆ. ಕಳೆದ ಆರು ವರ್ಷಗಳಿಂದ ವಿಚಾರಣಾಧೀನ ಕೈದಿಯಾಗಿ ಸಿದ್ದಗೌಡ ಹಿಂಡಲಗಾ ಜೈಲಿನಲ್ಲಿದ್ದನು.ನಾಲ್ಕು ದಿನಗಳ ಹಿಂದೆ ಸಿದ್ದಗೌಡ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದನು. ತಕ್ಷಣವೇ ಇದನ್ನು ಗಮನಿಸಿದ ಸಹ ಕೈದಿಗಳು ಹಗ್ಗ ಬಿಚ್ಚಿ ಕೆಳಗಿಳಿಸಿದ್ದರು. ಜೈಲು ಸಿಬ್ಬಂದಿ ತಕ್ಷಣವೇ ಈತನನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾನೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


Spread the love

About Laxminews 24x7

Check Also

ನಿಯಮ ಉಲ್ಲಂಘಿಸಿ ಶಾಸಕ ವೀರೇಂದ್ರ ಬಂಧನ-ವಕೀಲರ ವಾದ: ವಿಚಾರಣೆ ಮುಂದೂಡಿಕೆ

Spread the love ಬೆಂಗಳೂರು: ಆನ್​ಲೈನ್​ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಸಮನ್ಸ್ ಜಾರಿಗೊಳಿಸದೆ, ನಿಯಮಗಳನ್ನು ಉಲ್ಲಂಘಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ