Breaking News

ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಗ್ಯಾಂಗ್ ರೇಪ್:

Spread the love

ಆರೋಪಿಗಳ‌ ಪೈಕಿ ರಜತ್ ಡೇಟಿಂಗ್ ಆಯಪ್ ಮೂಲಕ ಯುವತಿಯನ್ನ ಪರಿಚಯಿಸಿಕೊಂಡಿದ್ದ.‌ ಪರಿಚಯ ಸ್ನೇಹಕ್ಕೆ ತಿರುಗಿತ್ತು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದರು‌.‌ ಸಲುಗೆ ಹೆಚ್ಚಾದ ಹಿನ್ನೆಲೆ ಇದೇ‌ ತಿಂಗಳು 24ರಂದು ಯುವತಿಯನ್ನ ರಜತ್ ಮನೆಗೆ ಆಹ್ವಾನಿಸಿದ್ದ.

ಈ ವೇಳೆ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜಧಾನಿಯಲ್ಲಿ ಪಶ್ಚಿಮ ಬಂಗಾಳ‌ ಮೂಲದ ಯುವತಿ ಮೇಲೆ ಸಾಮೂಹಿಕ ಆತ್ಯಾಚಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ‌ ದೆಹಲಿ ಮೂಲದ ನಾಲ್ವರು ಆರೋಪಿಗಳನ್ನು ಸಂಜಯನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳಾದ ರಜತ್, ಶಿವರಾಣ್, ದೇವ್ ಸರೋಯಿ ಹಾಗೂ ಯೊಗೇಶ್ ಕುಮಾರ್ ಎಂಬುವರನ್ನ ಬಂಧಿಸಿದ್ದಾರೆ.

ಪ್ರಕರಣದ ಕುರಿತು ಉತ್ತರ ವಿಭಾಗದ ಡಿಸಿಪಿ ವಿನಾಯಕ್​ ಪಾಟೀಲ್​​ ಮಾಹಿತಿಬಂಧಿತ ಆರೋಪಿಗಳು ದೆಹಲಿ ಮೂಲದವರಾಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಈಜುಗಾರರಾಗಿ ಗುರುತಿಸಿಕೊಂಡಿದ್ದಾರೆ ಎನ್ನಲಾಗ್ತಿದೆ. ಆರೋಪಿಗಳ‌ ಪೈಕಿ ರಜತ್ ಡೇಟಿಂಗ್ ಆಯಪ್ ಮೂಲಕ ಯುವತಿಯನ್ನ ಪರಿಚಯಿಸಿಕೊಂಡಿದ್ದ.‌ ಪರಿಚಯ ಸ್ನೇಹಕ್ಕೆ ತಿರುಗಿತ್ತು. ಇಬ್ಬರು ಮೊಬೈಲ್ ನಂಬರ್​ಅನ್ನು ಸಹ ವಿನಿಮಯ ಮಾಡಿಕೊಂಡಿದ್ದರು‌ ಎನ್ನಲಾಗ್ತಿದೆ.‌ ಹೀಗೆ ಇಬ್ಬರ ಮಧ್ಯೆ ಸಲುಗೆ ಹೆಚ್ಚಾದ ಹಿನ್ನೆಲೆ ಇದೇ‌ ತಿಂಗಳು 24ರಂದು ಯುವತಿಯನ್ನ ರಜತ್ ಮನೆಗೆ ಆಹ್ವಾನಿಸಿದ್ದನಂತೆ.

 ನಾಲ್ವರು ಆರೋಪಿಗಳ ಬಂಧನಆರೋಪಿಯ ಸ್ನೇಹಿತರೆಲ್ಲರೂ ಯುವತಿಯೊಂದಿಗೆ ಪಾರ್ಟಿ ಮಾಡಿದ್ದಾರೆ. ತಡರಾತ್ರಿಯಾಗಿದ್ದ ಕಾರಣ ರಜತ್ ರೂಮಿನಲ್ಲಿ ಯುವತಿ ಉಳಿದುಕೊಂಡಿದ್ದಳು. ಈ ವೇಳೆ‌ ಇಚ್ಛೆಗೆ ವಿರುದ್ಧವಾಗಿ ತನ್ನೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ‌ ಎಂದು ಸಂತ್ರಸ್ತೆ ದೂರಿದ್ದಾಳೆ. 


Spread the love

About Laxminews 24x7

Check Also

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ

Spread the love ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ