ಪಣಜಿ: ರಾಜ್ಯದ ಜನರಿಗೆ ಮೂರು ಎಲ್‍ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲು 40ಕೋಟಿ ರೂ. ಮೊತ್ತವನ್ನು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದರು.
ವಿಧಾನಸಭೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್‍ನ್ನು ಮಂಡಿಸಿದ ಅವರು ರಾಜ್ಯದ ಮತ್ತು ಜನರ ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಈ ಬಜೆಟ್ ಆಗಿದೆ ಎಂದು ಹೇಳಿದರು.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ಗೋವಾ ವಿಧಾನಸಭೆಯಲ್ಲಿ 2022-23ನೇ ಸಾಲಿನ ರಾಜ್ಯ ಬಜೆಟ್‍ನ್ನು ಮಂಡಿಸಿದ್ದಾರೆ. ಗೋವಾ ಜನತೆಗೆ, ರಾಜ್ಯದ ಅಭಿವೃದ್ಧಿಗೆ ಹಾಗೂ ರಾಜ್ಯದ ಏಳಿಗೆಗಾಗಿ ಇರುವ ಬಜೆಟ್ ಇದಾಗಿದೆ ಎಂದು ತಿಳಿಸಿದರು.
ಪಣಜಿ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಎರಡನೇ ಬಾರಿಗೆ ಗೋವಾದಲ್ಲಿ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರು ಪ್ರಮೋದ್ ಸಾವಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮೋದ್ ಸಾವಂತ್ ಕೊಂಕಣಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.