Breaking News

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಸಿ.ಎಂ ಇಬ್ರಾಹಿಂ ರಾಜೀನಾಮೆ

Spread the love

ಬೆಂಗಳೂರು: ಈಚೆಗಷ್ಟೇ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ.ಇಬ್ರಾಹಿಂ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ಸಹ ಇಂದೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದು ತಿಳಿಸಿದ್ದರು.

ಸ್ವಾಭಿಮಾನ ಹಾಗೂ ರಾಜ್ಯದ ಹಿತ ದೃಷ್ಡಿಯಿಂದ ಈ ರಾಜೀನಾಮೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. 1994ರಲ್ಲಿ ಉಂಟಾದ ರಾಜಕೀಯ ಪರಿಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಪಂಚರಾಜ್ಯ ಚುನಾವಣೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದರು. 


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ