ಬೆಂಗಳೂರು: ಸಿದ್ದರಾಮಯ್ಯ ಅವರು ಚುನಾವಣೆಗೆ ವರ್ಷವಿರುವಾಗಲೇ ಸೋಲನ್ನು ಒಪ್ಪಿಕೊಂಡು ಬಿಟ್ಟಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾಲೆಳಿದಿದೆ.
ಟ್ವೀಟ್‍ನಲ್ಲಿ ಏನಿದೆ?: ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಿದ್ದಾಗಲೇ ಸೋತ ಭಯ, ಇಂದು ವಿಪಕ್ಷ ನಾಯಕನಾಗಿರುವಾಗಲೂ ಕಾಡುತ್ತಿದೆ. ಚುನಾವಣೆಗೆ ವರ್ಷವಿರುವಾಗಲೇ ಸೋಲು ಒಪ್ಪಿಕೊಂಡು ಬಿಟ್ಟಿದ್ದಾರೆ. ಸಿದ್ದರಾಮಯ್ಯನವರೇ, ಜನರು ತಿರಸ್ಕರಿಸುವ ಭಯವನ್ನು ಮತಯಂತ್ರದ ಮೇಲೆ ಹಾಕುವುದೇಕೆ? ಎಂದು ಟೀಕಿಸಿದೆ.ಬುಧವಾರ ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಅಗತ್ಯತೆ ಕುರಿತ ಚರ್ಚೆಯಲ್ಲಿ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಇವಿಎಂ ಸಹ ಮ್ಯಾನ್ ಹ್ಯಾಂಡಲ್ ಯಂತ್ರವಾಗಿರುವುದರಿಂದ ಅದನ್ನೂ ಸಹ ತಿರುಚಬಹುದು ಅನ್ನಿಸುತ್ತದೆ. ಇವಿಎಂ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆಲ್ಲ ಚುನಾವಣಾ ಆಯೋಗ ಉತ್ತರ ಕೊಡಬೇಕು ಎಂದು ಒತ್ತಾಯಿಸಿದ್ದರು.