ಬೆಂಗಳೂರು : ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ.
ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಧಾನ ಮಂಡಲದ ಉಭಯ ಸದನ ನಾಯಕರ ಸಭೆಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ (Siddaramaiah) ಮಾತನಾಡಿದರು.
ಆದೇಶದ ಹಿನ್ನೆಲೆಯಲ್ಲಿ ಈಗ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಗ್ಗಂಟಾಗಿ ಪರಿಣಮಿಸಿದೆ. ಹೀಗಾಗಿ ಮೀಸಲು ಸೌಲಭ್ಯ ಒದಗಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕು. ಕಾನೂನಾತ್ಮಕವಾಗಿ ಪರಿಶೀಲಿಸಬೇಕು ಎಂದರು.